ದ್ವೇಷ ಭಾಷಣ ಆರೋಪ: ಉತ್ತರಪ್ರದೇಶ ವಿಧಾನಸಭೆ ಶಾಸಕ ಸ್ಥಾನದಿಂದ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿ ಉಚ್ಚಾಟನೆ!

ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿಗೆ ಸಂಸದ-ಶಾಸಕ ನ್ಯಾಯಾಲಯವು 2 ವರ್ಷಗಳ ಶಿಕ್ಷೆ ವಿಧಿಸಿದೆ.
Abbas Ansari
ಅಬ್ಬಾಸ್ ಅನ್ಸಾರಿ
Updated on

ಲಖನೌ: ಉತ್ತರಪ್ರದೇಶದ ಮೌ ಸದರ್ ಕ್ಷೇತ್ರದ ಶಾಸಕರಾಗಿದ್ದ ಅಬ್ಬಾಸ್ ಅನ್ಸಾರಿ ತಮ್ಮ ಶಾಸಕ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ. ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿಗೆ ಸಂಸದ-ಶಾಸಕ ನ್ಯಾಯಾಲಯವು 2 ವರ್ಷಗಳ ಶಿಕ್ಷೆ ವಿಧಿಸಿದೆ. ಈಗ ಶಿಕ್ಷೆ ವಿಧಿಸಿದ ಬೆನ್ನಲ್ಲೆ ಅಬ್ಬಾಸ್ ಅನ್ಸಾರಿ ವಿಧಾನಸಭೆಯ ಸದಸ್ಯತ್ವವೂ ಕೊನೆಗೊಂಡಿದೆ.

ಯುಪಿ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್ ದುಬೆ ಅವರು ಮೌ ಸದರ್ ವಿಧಾನಸಭಾ ಸ್ಥಾನ ಖಾಲಿಯಾಗಿದೆ ಎಂದು ಘೋಷಿಸಿ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಭಾನುವಾರ ರಜಾದಿನವಾಗಿದ್ದರೂ ಕಚೇರಿಯನ್ನು ಓಪನ್ ಮಾಡಿ ಆಯೋಗಕ್ಕೆ ಪತ್ರವನ್ನು ಕಳುಹಿಸಲಾಯಿತು. ಅಂದರೆ, ಈಗ ಮೌ ಸದರ್ ಸ್ಥಾನದಲ್ಲಿ ವಿಧಾನಸಭಾ ಉಪಚುನಾವಣೆ ನಡೆಯಲಿದೆ.

ಮೌ ವಿಧಾನಸಭಾ ಕ್ಷೇತ್ರವನ್ನು 1996ರಿಂದ ಅನ್ಸಾರಿ ಕುಟುಂಬವೇ ತನ್ನ ಹಿಡಿದಲ್ಲಿಟ್ಟುಕೊಂಡಿದೆ. 1996ರಲ್ಲಿ ಬಹುಜನ ಸಮಾಜ ಪಕ್ಷದ ಟಿಕೆಟ್‌ನಲ್ಲಿ ಮುಖ್ತಾರ್ ಅನ್ಸಾರಿ ಮೊದಲ ಬಾರಿಗೆ ಮೌ ಸದರ್‌ನಿಂದ ಗೆದ್ದರು. ಅದಾದ ನಂತರ ಅವರು ಸತತ ನಾಲ್ಕು ಬಾರಿ ಶಾಸಕರಾಗಿ ಮರು ಆಯ್ಕೆಯಾದರು. ಇದರಲ್ಲಿ, ಅಬ್ಬಾಸ್ ಅನ್ಸಾರಿ ಎರಡು ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು ಒಮ್ಮೆ ತಮ್ಮ ಪಕ್ಷದ ಕ್ವಾಮಿ ಏಕ್ತಾ ದಳದ ಟಿಕೆಟ್‌ನಲ್ಲಿ ಶಾಸಕರಾಗಿ ಆಯ್ಕೆಯಾದರು. 2017ರ ವಿಧಾನಸಭಾ ಚುನಾವಣೆಯಲ್ಲಿ, ಅಬ್ಬಾಸ್ ಅನ್ಸಾರಿ ಬಹುಜನ ಸಮಾಜ ಪಕ್ಷದಿಂದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆದ್ದರು.

ಆದಾಗ್ಯೂ, 2022ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ತಾರ್ ಅನ್ಸಾರಿ ಜೈಲಿನಲ್ಲಿದ್ದು ಅವರು ತಮ್ಮ ಮಗನನ್ನು ಅಲ್ಲಿಂದಲೇ ಅಭ್ಯರ್ಥಿಯನ್ನಾಗಿ ಮಾಡಿದರು. ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಟಿಕೆಟ್ ಪಡೆದು ಅಬ್ಬಾಸ್ ಅನ್ಸಾರಿ ಗೆದ್ದಿದ್ದರು. ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷವು ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಹೊಂದಿತ್ತು. ಆದಾಗ್ಯೂ, ಈಗ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷವು NDA ಸೇರಿದೆ.

Abbas Ansari
ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು: ಸಿಎಂ ಸಿದ್ದರಾಮಯ್ಯ

ನ್ಯಾಯಾಲಯವು ಅಬ್ಬಾಸ್ ಅನ್ಸಾರಿ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 189, 153A, 171F ಮತ್ತು 506 ರ ಅಡಿಯಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಅಬ್ಬಾಸ್ ಅನ್ಸಾರಿಗೆ ಸೆಕ್ಷನ್ 189 ಮತ್ತು 153A ಅಡಿಯಲ್ಲಿ 2 ವರ್ಷಗಳ ಶಿಕ್ಷೆ ವಿಧಿಸಲಾಗಿದೆ. 171F ಅಡಿಯಲ್ಲಿ 6 ತಿಂಗಳ ಶಿಕ್ಷೆ ಮತ್ತು ಸೆಕ್ಷನ್ 506 ಅಡಿಯಲ್ಲಿ 1 ವರ್ಷದ ಶಿಕ್ಷೆ ವಿಧಿಸಲಾಗಿದೆ. ಈ ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಜಾರಿಯಲ್ಲಿರುತ್ತವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಂತಹ ಪರಿಸ್ಥಿತಿಯಲ್ಲಿ, ಅಬ್ಬಾಸ್ ಅನ್ಸಾರಿ 2 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಅದೇ ಸಮಯದಲ್ಲಿ, ಅಬ್ಬಾಸ್ ಅನ್ಸಾರಿ ಕಿರಿಯ ಸಹೋದರ ಉಮರ್ ಅನ್ಸಾರಿ ಅವರನ್ನು ಈ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಾಯಿತು. ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿತು.

2022ರ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಅಬ್ಬಾಸ್ ಅನ್ಸಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರು ಪ್ರಚೋದನಕಾರಿ ಭಾಷಣ ಮಾಡಿದರು. ಅಧಿಕಾರಿಗಳಿಗೆ ಬೆದರಿಕೆ ಹಾಕಿದರು. ಈ ಸಂಬಂಧ ಮೌದಲ್ಲಿನ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com