ತಪಾಸಣೆ ನಡೆಸುತ್ತಿರುವ ಭದ್ರತಾ ಪಡೆ.
ತಪಾಸಣೆ ನಡೆಸುತ್ತಿರುವ ಭದ್ರತಾ ಪಡೆ.

ಜಮ್ಮು ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಬಾಂಬ್ ನಿಷ್ಕ್ರೀಯ ತಂಡ, ಶ್ವಾನ ದಳದಿಂದ ಪರಿಶೀಲನೆ

ಭಾನುವಾರ ಸಂಜೆ ರೈಲ್ವೆ ಕಂಟ್ರೋಲ್ ರೂಂಗೆ ಅಪರಿಚತ ವ್ಯಕ್ತಿಗಳು ಬೆದರಿಕೆ ಕರೆ ಮಾಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published on

ಜಮ್ಮು: ಜಮ್ಮು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ರೈಲ್ವೆ ಕಂಟ್ರೋಲ್ ರೂಂಗೆ ಕರೆ ಮಾಡಿರುವ ದುಷ್ಕರ್ಮಿಗಳು, ರೈಲು ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಭಾನುವಾರ ಸಂಜೆ ರೈಲ್ವೆ ಕಂಟ್ರೋಲ್ ರೂಂಗೆ ಅಪರಿಚತ ವ್ಯಕ್ತಿಗಳು ಬೆದರಿಕೆ ಕರೆ ಮಾಡಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೂಡಲೇ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ ಅಧಿಕಾರಿಗಳು ಬಾಂಬ್ ನಿಷ್ಕ್ರೀಯ ತಂಡ, ಶ್ವಾನ ದಳದೊಂದಿದೆ ತೀವ್ರ ತಪಾಸಣೆ ನಡೆಸಿದರು. ಆದರೆ, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಲಿಲ್ಲ ಎಂದು ಹೇಳಿದ್ದಾರೆ.

ಬೆದರಿಕೆ ಕರೆ ಹಿನ್ನೆಲೆಯಲ್ಲಿ ಭಾನುವಾರ ಮಧ್ಯರಾತ್ರಿಯಿಂದ ಇಂದು ಬೆಳಗ್ಗಿನ ವರೆಗೂ ಶೋಧ ಕಾರ್ಯಾಚರಣೆ ನಡೆಯಿತು. ಹಿರಿಯ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಡೆಸಲಾದ ಶೋಧ ಕಾರ್ಯಾಚರಣೆಯಲ್ಲಿ ಸ್ನಿಫರ್ ಡಾಗ್ಸ್ ಮತ್ತು ಮೆಟಲ್ ಡಿಟೆಕ್ಟರ್‌ಗಳನ್ನು ಸಹ ಬಳಸಲಾಯಿತು. ಯಾವುದೇ ವಸ್ತುಗಳು ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂಬ ನಿರ್ಧಾರಕ್ಕೆ ಬರಲಾಯಿತು.

ಇದೀಗ ಮುನ್ನೆಚ್ಚರಿಕಾ ಕ್ರಮವಾಗ ರೈಲ್ವೆ ನಿಲ್ದಾಣದಲ್ಲಿ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ಬೆದರಿಕೆ ಕರೆ ಮಾಡಿದ ವ್ಯಕ್ತಿಗಳಿಗಾಗಿ ಹುಡುಕಾಟ ಆರಂಭವಾಗಿದೆ ಎಂದು ತಿಳಿಸಿದ್ದಾರೆ.

ತಪಾಸಣೆ ನಡೆಸುತ್ತಿರುವ ಭದ್ರತಾ ಪಡೆ.
ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ, ಭಾರಿ ವಿಳಂಬ

X
Open in App

Advertisement

X
Kannada Prabha
www.kannadaprabha.com