
ಕೋಲ್ಕತ್ತಾ: ಸಿಕ್ಕಿಂನ ಸೇನಾ ಶಿಬಿರದ ಮೇಲೆ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ನಾಪತ್ತೆಯಾಗಿರುವ 6 ಮಂದಿ ಸೇನಾ ಸಿಬ್ಬಂದಿಗಳಿಗಾಗಿ ಕಾರ್ಯಾಚರಣೆ ಮುಂದುವರೆದಿದ್ದು, ಕಾರ್ಯಾಚರಣೆಗೆ ಇದೀಗ 23 ಮಂದಿ ಎನ್'ಡಿಆರ್'ಎಫ್ ಸಿಬ್ಬಂದಿ ಕೂಡ ಕೈಜೋಡಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್'ಡಿಆರ್'ಎಫ್) ಬಳಿ ಕಾರ್ಯಾಚರಣೆಗೆ ಅಗತ್ಯವಿರುವ ಸ್ಯಾಟಲೈಟ್ ಫೋನ್ ಹಾಗೂ ಅಗತ್ಯ ತುರ್ತು ಉಪಕರಣಗಳಿದ್ದು, ಕಾರ್ಯಾಚರಣೆಗೆ ಸಾಕಷ್ಟು ಸಹಾಯಕವಾಗಲಿದೆ ಎನ್ನಲಾಗಿದೆ.
ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಸೇನಾ ಶಿಬಿರದ ಮೇಲೆ ಭೂಕುಸಿತ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದರೆ, ನಾಲ್ವರು ಗಾಯಗೊಂಡಿದ್ದರು. ಅಲ್ಲದೆ 6 ಮಂದಿ ಸೇನಾ ಸಿಬ್ಬಂದಿ ಕೂಡ ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದರು.
ಈ ನಡುವೆ ಹವಾಮಾನ ಪರಿಸ್ಥಿತಿಗಳನ್ನು ಅವಲಂಬಿಸಿ ಪರ್ಯಾಯ ಪಾದಚಾರಿ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಹೆಲಿಪ್ಯಾಡ್ ಕಾರ್ಯಾಚರಣೆಗಳ ಕಾರ್ಯಸಾಧ್ಯತೆಯನ್ನು ಪರಿಶೀಲಿಸುವಂತೆ ಆಡಳಿತ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.
Advertisement