
ಕೊರಾಪುಟ್: ಒಡಿಶಾದ ಕೊರಾಪುಟ್‌ನಲ್ಲಿರುವ ಸಹೀದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ದಾಖಲಾದ ಕೆಲವೇ ಗಂಟೆಗಳಲ್ಲಿ ತೀವ್ರ ಅಸ್ವಸ್ಥಗೊಂಡಿದ್ದ ಐವರು ರೋಗಿಗಳು ಸಾವನ್ನಪ್ಪಿದ್ದಾರೆ. ಮಂಗಳವಾರ ರಾತ್ರಿ ಆಸ್ಪತ್ರೆ ಸಿಬ್ಬಂದಿ ತಪ್ಪು ಇಂಜೆಕ್ಷನ್ ನೀಡಿದ್ದರಿಂದ ಈ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ, ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಐಸಿಯುಗೆ ದಾಖಲಾಗಿದ್ದರು. ಅವರ ಸಾವಿಗೆ ಸ್ವಲ್ಪ ಮೊದಲು ಆಸ್ಪತ್ರೆ ಸಿಬ್ಬಂದಿ ರೋಗಿಗಳಿಗೆ ಇಂಜೆಕ್ಷನ್ ನೀಡಿದ್ದಾರೆ ಎಂದು ಅವರ ಕುಟುಂಬಗಳು ಆರೋಪಿಸಿವೆ.
ಈ ರೋಗಿಗಳನ್ನು ಶಸ್ತ್ರಚಿಕಿತ್ಸೆಯ ನಂತರದ ಆರೈಕೆ ಮತ್ತು ಗಂಭೀರ ಮೇಲ್ವಿಚಾರಣೆಗಾಗಿ ಐಸಿಯು ಮತ್ತು ಶಸ್ತ್ರಚಿಕಿತ್ಸಾ ವಾರ್ಡ್‌ಗಳಿಗೆ ದಾಖಲಿಸಲಾಗಿತ್ತು ಎಂದು ವರದಿಯಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಸಾವಿಗೆ ನಿಖರ ಕಾರಣ ಕಂಡುಹಿಡಿಯಲು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು SLNMCH ನ ಸೂಪರಿಂಟೆಂಡೆಂಟ್ ಸುಸಂತಾ ಕುಮಾರ್ ಸಾಹು ತಿಳಿಸಿದ್ದಾರೆ.
ನಾವು ಎಲ್ಲಾ ಇಲಾಖಾ ಮುಖ್ಯಸ್ಥರ ಸಭೆಯನ್ನು ಕರೆದಿದ್ದೇವೆ. ಮಂಗಳವಾರ ರಾತ್ರಿ ಸಾವನ್ನಪ್ಪಿದ ರೋಗಿಗಳನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕವಾಗಿ, ಸಾವುಗಳು ಯಾವುದೇ ತಪ್ಪುಇಂಜೆಕ್ಷನ್‌ನಿಂದ ಸಂಭವಿಸಿಲ್ಲ ಎಂದು ತೋರುತ್ತದೆ. ಆದಾಗ್ಯೂ, ಆರೋಪಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ" ಎಂದು ಅವರು ಹೇಳಿದರು. ಮೂವರು ರೋಗಿಗಳು ಐಸಿಯುನಲ್ಲಿ ಸಾವನ್ನಪ್ಪಿದರೆ, ಇಬ್ಬರು ಸಾಮಾನ್ಯ ವಾರ್ಡ್‌ನಲ್ಲಿ ಮೃತ ಪಟ್ಟಿದ್ದರು. ಮೃತರ ಕುಟುಂಬಗಳು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿದರು, ನಂತರ ಪೊಲೀಸರನ್ನು ನಿಯೋಜಿಸಲಾಯಿತು.
Advertisement