
ನವದೆಹಲಿ: IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಇದು 'ಹೃದಯವಿದ್ರಾವಕ ಘಟನೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
'ಬೆಂಗಳೂರಿನಲ್ಲಿ ನಡೆದ ದುರಂತ ಅತ್ಯಂತ ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಜೀವಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ.
Advertisement