
ನವದೆಹಲಿ: ದೇಶದಲ್ಲಿ ಎರಡು ಹಂತಗಳಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿ ನಡೆಸಲಾಗುವುದು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.
ಅಕ್ಟೋಬರ್ 1,2026 ರಿಂದ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ಹಿಮಚಾದಿತ ಪ್ರದೇಶಗಳಲ್ಲಿ ಮತ್ತು ಮಾರ್ಚ್ 1,2027 ರಿಂದ ದೇಶದ ಉಳಿದ ಭಾಗಗಳಲ್ಲಿ ಜನ ಗಣತಿಯೊಂದಿಗೆ ಜಾತಿ ಗಣತಿ ನಡೆಸಲಾಗುವುದು ಎಂದು ಸಚಿವಾಲಯ ಪ್ರಕಟಿಸಿದೆ.
ಜನಗಣತಿ-2027ನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ. ಇದರೊಂದಿಗೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ.
ಮಾರ್ಚ್ 2027ರ ಮೊದಲ ದಿನದಿಂದಲೇ ಗಣತಿ ಕಾರ್ಯ ಪ್ರಾರಂಭವಾಗಲಿದೆ. ಈ ಸಂಬಂಧ ಜನಗಣತಿ ಕಾಯ್ದೆ 1948ರ ಸೆಕ್ಷನ್ 3ರ ನಿಬಂಧನೆಯಂತೆ 16.06,2025 ರಂದು ತಾತ್ಕಾಲಿಕವಾಗಿ ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
2011 ರಲ್ಲಿ ಕೊನೆಯ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗಿತ್ತು.
Advertisement