
ನವದೆಹಲಿ: ಜುಲೈ 21 ರಿಂದ ಆಗಸ್ಟ್ 12 ರವರೆಗೆ ಸಂಸತ್ತಿನ ಮಳೆಗಾಲದ ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ನಿಖರವಾದ ದಾಳಿ ಆಪರೇಷನ್ ಸಿಂದೂರ್ ನಂತರ ಇದು ಸಂಸತ್ತಿನ ಮೊದಲ ಅಧಿವೇಶನವಾಗಿದೆ.
Advertisement