ನವದೆಹಲಿ: ಸಂಸತ್ ಮಳೆಗಾಲದ ಅಧಿವೇಶನ ಜುಲೈ 21 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಬುಧವಾರ ತಿಳಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಈ ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಅಧಿವೇಶನ ಕರೆಯುವ ಶಿಫಾರಸನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವರು ಹೇಳಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಈ ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
Advertisement