
ಜಬುವಾ: ಮಧ್ಯಪ್ರದೇಶದ ಜಬುವಾ ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ಸಿಮೆಂಟ್ ತುಂಬಿದ ಟ್ರೇಲರ್ ಟ್ರಕ್ ವ್ಯಾನ್ ಮೇಲೆ ಉರುಳಿ ಬಿದ್ದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ನಸುಕಿನ ಜಾವ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಮೇಘನಗರ ತಹಸಿಲ್ ಪ್ರದೇಶದ ಸಂಜೆಲಿ ರೈಲ್ವೆ ಕ್ರಾಸಿಂಗ್ ಬಳಿ ತಾತ್ಕಾಲಿಕ ರಸ್ತೆಯ ಮೂಲಕ ನಿರ್ಮಾಣ ಹಂತದಲ್ಲಿರುವ ರೈಲು ಮೇಲ್ಸೇತುವೆ (ಆರ್‌ಒಬಿ) ದಾಟುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ವ್ಯಾನ್ ಮೇಲೆ ಉರುಳಿತು ಎಂದು ಜಬುವಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮವಿಲೋಚನ್ ಶುಕ್ಲಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Advertisement