ರಾಜೇಶ್ ಸೋನಿ
ರಾಜೇಶ್ ಸೋನಿ

ಆಪರೇಷನ್ ಸಿಂಧೂರ್ ಬಗ್ಗೆ ವಿವಾದಾತ್ಮಕ ಪೋಸ್ಟ್: ಗುಜರಾತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಂಧನ

ಸೋನಿ ತಮ್ಮ ಫೇಸ್‌ಬುಕ್ ಪುಟದಲ್ಲಿ ಆಪರೇಷನ್ ಸಿಂಧೂರ್, ರಫೇಲ್ ಒಪ್ಪಂದ ಮತ್ತು ಇತರ ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿದ ವಿಡಿಯೋಗಳು ಮತ್ತು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Published on

ಅಹಮದಾಬಾದ್: ಆಪರೇಷನ್ ಸಿಂಧೂರ್ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‌ ಹಾಕಿದ ಆರೋಪದ ಮೇಲೆ ಗುಜರಾತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೇಶ್ ಸೋನಿ ಅವರನ್ನು ಗಾಂಧಿನಗರ ಸೈಬರ್ ಕ್ರೈಮ್ ಬ್ರಾಂಚ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಸೈಬರ್ ಅಪರಾಧ ವಿಭಾಗದ ಸಬ್-ಇನ್ಸ್‌ಪೆಕ್ಟರ್ ನೀಡಿದ ದೂರಿನ ಪ್ರಕಾರ, ಸೋನಿ ತಮ್ಮ ಫೇಸ್‌ಬುಕ್ ಪುಟದಲ್ಲಿ ಆಪರೇಷನ್ ಸಿಂಧೂರ್, ರಫೇಲ್ ಒಪ್ಪಂದ ಮತ್ತು ಇತರ ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿದ ವಿಡಿಯೋಗಳು ಮತ್ತು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಭಾರತೀಯ ಸೇನೆಯ ನೈತಿಕತೆಯನ್ನು ಕುಗ್ಗಿಸುವ, ಕರ್ತವ್ಯಗಳ ಬಗ್ಗೆ ಅನುಮಾನ ಮೂಡಿಸುವ, ಸಶಸ್ತ್ರ ಪಡೆಗಳ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಮಾಹಿತಿ ನೀಡುವ ಗುರಿಯನ್ನು ಈ ಪೋಸ್ಟ್‌ಗಳು ಹೊಂದಿವೆ ಎಂದು ಆರೋಪಿಸಲಾಗಿದೆ.

ರಾಜೇಶ್ ಸೋನಿ
'ಆಪರೇಷನ್ ಸಿಂಧೂರ್' ಬಗ್ಗೆ ವಿವಾದಾತ್ಮಕ ಪೋಸ್ಟ್: ಅಶೋಕ ವಿವಿ ಪ್ರಾಧ್ಯಾಪಕನಿಗೆ 14 ದಿನ ನ್ಯಾಯಾಂಗ ಬಂಧನ

"ಸೈನಿಕರಿಗೆ ಕ್ರೆಡಿಟ್ ಸಿಗುವುದಿಲ್ಲ ಎಂಬುದನ್ನು ವಿಶೇಷವಾಗಿ ಗಮನಿಸಿ. ಆಪರೇಷನ್ ಸಿಂಧೂರ್‌ನಲ್ಲಿ ರಫೇಲ್ ಹಾರಾಟದ ವೆಚ್ಚವನ್ನು ಈಗ ದ್ವಿಗುಣಗೊಳಿಸಲಾಗುತ್ತಿದೆ ಮತ್ತು ಆ ವೆಚ್ಚವನ್ನು ಭವಿಷ್ಯದಲ್ಲಿ ಅವರ ಫೋಟೋ ಮತ್ತು ಪ್ರಚಾರಕ್ಕಾಗಿ ಬಳಸಲಾಗುತ್ತದೆ" ಎಂಬ ಹೇಳಿಕೆ ಒಳಗೊಂಡ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ಸೋನಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸೋನಿ ಅವರ ಬಂಧನ ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದು, ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಶಕ್ತಿಸಿನ್ಹ್ ಗೋಹಿಲ್ ಈ ಕ್ರಮ ಪ್ರತಿಪಕ್ಷಗಳ ಧ್ವನಿ ಅಡಗಿಸುವ ಸ್ಪಷ್ಟ ಪ್ರಯತ್ನ ಎಂದು ಖಂಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com