
ಪುಣೆ: ಮಹಾರಾಷ್ಟ್ರದ ಪುಣೆಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಮಾಡಲಾಗಿದೆ.
ಜೂನ್ 3 ರಂದು ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸೋಲಿಸಿ ಆರ್ ಸಿಬಿ ಟ್ರೋಫಿ ಮುಡಿಗೇರಿಸಿಕೊಳ್ಳುತ್ತಿದ್ದಂತೆಯೇ ಪುಣೆಯ ನಾಮ್ದಾರ್ ಗೋಪಾಲ ಕೃಷ್ಣ ಗೋಖಲೆ ಚೌಕದಲ್ಲಿ (Goodluck Chowk) ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಾಗಿದೆ.
ಈ ಹಿನ್ನೆಲೆಯಲ್ಲಿ 40 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. RCB ಸಂಭ್ರಮಾಚರಣೆ ವೇಳೆಯಲ್ಲಿ ಪಟಾಕಿ ಸಿಡಿಸಿ, ಗದ್ದಲ ಉಂಟುಮಾಡಿದ್ದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಡೆಕ್ಕನ್ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.
ಪಟಾಕಿ ಸಿಡಿಸಿುವ ಮೂಲಕ ಶಾಂತಿಗೆ ಭಂಗ ತಂದ, ಸಾರ್ವಜನಿಕ ವಾಹನಗಳು ಹಾಗೂ ನಾಗರಿಕರಿಗೆ ತೊಂದರೆ ನೀಡಿದ ಆರೋಪದ ಮೇರೆಗೆ ಮಹಾರಾಷ್ಟ್ರ ಪೊಲೀಸ್ ಕಾಯ್ದೆಯ ನಿಬಂಧನೆಗಳಡಿ ಸುಮಾರು 40 ವ್ಯಕ್ತಿಗಳ ಮೇಲೆ ಆರೋಪ ಹೊರಿಸಲಾಗಿದೆ. ಸಂಭ್ರಮಾಚರಣೆಯಿಂದ ವಾಹನ ಸವಾರರಿಗೆ ಅನಾನೂಕೂಲವಾಗಿದೆ. ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಮತ್ತಷ್ಟು ಅಭಿಮಾನಿಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿ ಹೇಳಿದರು.
ಮಂಗಳವಾರ ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ರನ್ ಗಳಿಂದ ರೋಚಕ ಗೆಲುವು ಸಾಧಿಸಿದ RCB ತನ್ನ ಚೊಚ್ಚಲ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಆ ಮೂಲಕ 18 ವರ್ಷಗಳ ಕಾಯುವಿಕೆಗೆ ಅಂತ್ಯ ಹಾಡಿತು.
Advertisement