ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಐವರು ನಕ್ಸಲರು ಬಲಿ

ಕಳೆದ ಮೂರು ದಿನಗಳಲ್ಲಿ ಉನ್ನತ ನಕ್ಸಲ್ ನಾಯಕರಾದ ಸುಧಾಕರ್ ಮತ್ತು ಭಾಸ್ಕರ್ ಸೇರಿದಂತೆ ಏಳು ನಕ್ಸಲರನ್ನು ತಟಸ್ಥಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಐವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇತ್ತೀಚಿನ ಸಾವುನೋವುಗಳೊಂದಿಗೆ, ಕಳೆದ ಮೂರು ದಿನಗಳಲ್ಲಿ ಉನ್ನತ ನಕ್ಸಲ್ ನಾಯಕರಾದ ಸುಧಾಕರ್ ಮತ್ತು ಭಾಸ್ಕರ್ ಸೇರಿದಂತೆ ಏಳು ನಕ್ಸಲರನ್ನು ತಟಸ್ಥಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

"ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಭದ್ರತಾ ಪಡೆಗಳು ಏಳು ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಂಡಿವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಹಿರಿಯ ನಕ್ಸಲ್ ನಾಯಕ ಬಲಿ

ಶನಿವಾರ, ಗುಂಡಿನ ಚಕಮಕಿಯ ನಂತರ ಎರಡು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಶುಕ್ರವಾರ ಮಧ್ಯರಾತ್ರಿ ನಡೆದ ಗುಂಡಿನ ಚಕಮಕಿಯ ನಂತರ ಮೂರು ಶವಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಉದ್ಯಾನದಲ್ಲಿ ಹಿರಿಯ ನಕ್ಸಲ್ ನಾಯಕರೊಬ್ಬರು ಅಡಗಿರುವ ಮಾಹಿತಿ ಪಡೆದುಕೊಂಡ ಬಳಿಕ ಜಿಲ್ಲಾ ಮೀಸಲು ಪಡೆ (DRG)ಕೋಬ್ರಾ (ಕಮಾಂಡೋ ಬೆಟಾಲಿಯನ್ )ಮತ್ತು ವಿಶೇಷ ಕಾರ್ಯಪಡೆ (STF)ಒಳಗೊಂಡ ಜಂಟಿ ತಂಡ ಗುರುವಾರದಿಂದ ಶೋಧ ಕಾರ್ಯಾಚರಣೆ ನಡೆಸುತಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com