ಮುಜಫರ್‌ನಗರ: 'ಬ್ಯಾಗ್‌ನಲ್ಲಿ 10 ಬಂದೂಕು' ಹೊಂದಿದ್ದ ಫುಡ್ ಡೆಲಿವರಿ ಏಜೆಂಟ್ ಬಂಧನ!

ಅಧಿಕಾರಿಗಳು ಡೆಲಿವರಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ ದೇಶಿ ನಿರ್ಮಿತ 10 ಪಿಸ್ತೂಲ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
 10 ಪಿಸ್ತೂಲ್‌ಗಳು
10 ಪಿಸ್ತೂಲ್‌ಗಳು
Updated on

ಮುಜಫರ್‌ನಗರ: ಹರಿಯಾಣದಲ್ಲಿ ಜನಪ್ರಿಯ ಆಹಾರ ವಿತರಣಾ ಅಪ್ಲಿಕೇಶನ್‌ನ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಮೀರತ್‌ನ 23 ವರ್ಷದ ವ್ಯಕ್ತಿಯೊಬ್ಬ ಅಕ್ರಮವಾಗಿ ಬಂದೂಕುಗಳನ್ನು ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಮುಜಫರ್ನಗರ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಅಧಿಕಾರಿಗಳು ಡೆಲಿವರಿ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ ದೇಶಿ ನಿರ್ಮಿತ 10 ಪಿಸ್ತೂಲ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ರಾಮರಾಜ್ ಪ್ರದೇಶದ ಜಮಾಲ್‌ಪುರ ಕಾಲುವೆ ಕಲ್ವರ್ಟ್ ಬಳಿ ಆರೋಪಿಯನ್ನು ತಡೆದಿದ್ದಾರೆ. ಈ ವೇಳೆ ಬೈಕ್ ನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯನ್ನು ಹಿಡಿದು ಪರಿಶೀಲಿಸಿದಾಗ ಆತನ ಬ್ಯಾಗ್ ನಲ್ಲಿ ಶಸ್ತ್ರಾಸ್ತ್ರಗಳು ಮತ್ತು ಕಾರ್ಟ್ರಿಜ್‌ಗಳು ಪತ್ತೆಯಾಗಿವೆ.

 10 ಪಿಸ್ತೂಲ್‌ಗಳು
ಬೆಂಗಳೂರು: ಫುಡ್ ಡೆಲಿವರಿ ಏಜೆಂಟ್ ಮೇಲೆ ಬೀದಿ ನಾಯಿಗಳ ದಾಳಿ, ಇಬ್ಬರ ವಿರುದ್ಧ ಪ್ರಕರಣ ದಾಖಲು

ಬಂಧಿತ ಆರೋಪಿಯನ್ನು ಸುಧಾಂಶು ಕುಮಾರ್ ಎಂದು ಗುರುತಿಸಲಾಗಿದ್ದು, ದೆಹಲಿ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಿಗೆ ಅಕ್ರಮವಾಗಿ ಬಂದೂಕುಗಳನ್ನು ಕಳ್ಳಸಾಗಣೆ ಮಾಡಲು ತನ್ನ ಫುಡ್ ಡೆಲಿವರಿ ಏಜೆಂಟ್ ಕೆಲಸವನ್ನು ಬಳಸುತ್ತಿದ್ದ. ಆತನಿಗೆ ಕ್ರಿಮಿನಲ್ ಇತಿಹಾಸವಿದ್ದು, ಆತನ ವಿರುದ್ಧ ಐದು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಮುಜಫರ್ನಗರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ವರ್ಮಾ ಹೇಳಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಸುಧಾಂಶು ಅಕ್ರಮ ಶಸ್ತ್ರಾಸ್ತ್ರ ವ್ಯಾಪಾರದಲ್ಲಿ ಇತರ ಆರು ಜನರ ಭಾಗಿಯಾಗಿರುವುದನ್ನು ಬಹಿರಂಗಪಡಿಸಿದ್ದಾನೆ. ಈ ಶಂಕಿತರನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಈ ಗ್ಯಾಂಗ್ ವಿವಿಧ ಪ್ರದೇಶಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂದು ವರದಿಯಾಗಿದೆ. ಆರೋಪಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಶಸ್ತ್ರಾಸ್ತ್ರಗಳ ಮೂಲ ಮತ್ತು ಖರೀದಿದಾರರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com