ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಇಂಟರ್ನೆಟ್ ಸೇವೆ ಸ್ಥಗಿತ, ಹಲವೆಡೆ ಕರ್ಫ್ಯೂ ಜಾರಿ...!

ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಮಣಿಪುರ
ಮಣಿಪುರ
Updated on

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದು ತಿಳಿದುಬಂದಿದೆ.

ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್ ಮತ್ತು ಕಕ್ಚಿಂಗ್‌ನಂತಹ ಇತರ ಜಿಲ್ಲೆಗಳಲ್ಲಿಯೂ ಕರ್ಫ್ಯೂ ಜಾರಿ ಮಾಡಲಾಗಿದೆ, ಬಿಷ್ಣುಪುರ ಜಿಲ್ಲೆಯಲ್ಲೂ ಕರ್ಫ್ಯೂ ವಿಧಿಸಲಾಗಿದೆ.

ಪ್ರತಿಭಟನಾಕಾರರು ಮೈತೆಯಿ ಸ್ವಯಂಸೇವಕ ಗುಂಪು ಅರಾಂಬೈ ಟೆಂಗೋಲ್‌ಗೆ ಸೇರಿದವರಾಗಿದ್ದರು. ಇವರು ತಮ್ಮ ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದು, ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಇದೇ ಗುಂಪು ಹಿಂದಿನ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಕುಕಿ ಗ್ರಾಮಗಳ ಮೇಲೆ ದಾಳಿ ಮಾಡಿದ ಆರೋಪವನ್ನು ಕೂಡ ಹೊಂದಿದೆ.

ಮಣಿಪುರ
ಮಣಿಪುರ ರಾಜ್ಯಪಾಲರ ನಿವಾಸದ ಬಳಿ ಭದ್ರತಾ ಪಡೆಗಳೊಂದಿಗೆ ಪ್ರತಿಭಟನಾಕಾರರ ಘರ್ಷಣೆ; 7 ಜನರಿಗೆ ಗಾಯ

ಅರಾಂಬೈ ಟೆಂಗೋಲೆ ನಾಯಕನ ಬಂಧನದ ನಂತರ, ಭಾರೀ ಜನ ಸೇರಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಯ್ತು. ಸುಮಾರು 50 ಸುತ್ತು ಗುಂಡಿನ ಚಕಮಕಿ ಕೇಳಿಬಂದಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಗುಂಡಿನ ದಾಳಿ ಮತ್ತು ಪ್ರತಿಭಟನೆಗಳು ಇಂದು ಬೆಳಿಗ್ಗೆಯವರೆಗೂ ಕೂಡ ನಡೆಯಿತು. ಅರಾಂಬೈ ಟೆಂಗೋಲ್ ಸದ್ಯ 10 ದಿನಗಳ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ.

ಇದಿಗ ಇಂಫಾಲ ಪಶ್ಚಿಮ, ಇಂಫಾಲ ಪೂರ್ವ, ತೌಬಲ್ , ಬಿಷ್ಣುಪುರ ಮತ್ತು ಕಕ್ಚಿಂಗ್ ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸಿಕೊಂಡು, ದ್ವೇಷ ಭಾಷಣ ಮತ್ತು ದ್ವೇಷದ ವಿಡಿಯೊ ಸಂದೇಶಗಳನ್ನು ಪ್ರಸಾರ ಮಾಡಿ ಸಾರ್ವಜನಿಕರನ್ನು ಕೆರಳಿಸುವ ಶಂಕೆ ಇದೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹಾಗಾಗಿ ಇಂಫಾಲ ಪೂರ್ವ, ಇಂಫಾಲ ಪಶ್ಚಿಮ, ತೌಬಲ್, ಕಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಸದ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಯುಕ್ತ ಎನ್. ಅಶೋಕ್ ಕುಮಾರ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಆದೇಶವನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com