
ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಸೋಮವಾರ ನಕ್ಸಲರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಹಿರಿಯ ಪೊಲೀಸ್ ಅಧಿಕಾರಿ ಮತ್ತು ಇತರ ಕೆಲವು ಸಿಬ್ಬಂದಿಗಳಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.
ಕೊಂಟಾ-ಎರ್ರಾಬೋರ್ ರಸ್ತೆಯ ದೋಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಕೊಂಟಾ ವಿಭಾಗ) ಆಕಾಶ್ ರಾವ್ ಗಿರಿಪುಂಜೆ ಮತ್ತು ಇತರ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಐಇಡಿ ಸ್ಫೋಟಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ನಕ್ಸಲರು ಬಂದ್'ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಿ, ಅಧಿಕಾರಿಗಳು ಗಸ್ತು ತಿರುಗುತ್ತಿದ್ದರು. ಈ ವೇಳೆ ಐಇಡಿ ಸ್ಫೋಟಗೊಂಡಿದ್ದು, ಸ್ಫೋಟದಲ್ಲಿ ಎಎಸ್‌ಪಿ, ಇತರ ಕೆಲವು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಎಲ್ಲಾ ಗಾಯಾಳು ಸಿಬ್ಬಂದಿಯನ್ನು ಕೊಂಟಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಎಎಸ್‌ಪಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಎಎಸ್‌ಪಿಯನ್ನು ಸ್ಥಳಾಂತರಿಸಲು ಪ್ರಯತ್ನಗಳ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement