ಭಾರತೀಯರ ಮೇಲೆ ಅಮೆರಿಕಾ ಅಮಾನೀಯ ವರ್ತನೆ: ಪ್ರಧಾನಿ ಮೋದಿ ಮೌನದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ವಿಮಾನ ನಿಲ್ದಾಣವೊಂದರಲ್ಲಿ ಅಮೆರಿಕದಲ್ಲಿರುವ ಭಾರತೀಯ ವಿದ್ಯಾರ್ಥಿಗೆ ಕೈಕೋಳ ತೊಡಿಸಿ, ಅವರನ್ನು ನೆಲದ ಮೇಲೆ ಎಳೆದಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವಿಡಿಯೋ ವೈರಲ್ ಆಗಿದೆ.
ಭಾರತೀಯ ವಿದ್ಯಾರ್ಥಿ ಮೇಲೆ ದೌರ್ಜನ್ಯವೆಸಗುತ್ತಿರುವ ಅಮೆರಿಕಾ ಪೊಲೀಸರು.
ಭಾರತೀಯ ವಿದ್ಯಾರ್ಥಿ ಮೇಲೆ ದೌರ್ಜನ್ಯವೆಸಗುತ್ತಿರುವ ಅಮೆರಿಕಾ ಪೊಲೀಸರು.
Updated on

ನವದೆಹಲಿ: ಭಾರತೀಯರ ಮೇಲೆ ಅಮೆರಿಕಾ ಪದೇ ಪದೇ ಅಮಾನವೀಯವಾಗಿ ವರ್ತಿಸುತ್ತಿದ್ದರೂ, ಪ್ರತಿಕ್ರಿಯೆ ನೀಡಿದೆ ಮೌನ ತಾಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಂಗಳವಾರ ವಾಗ್ದಾಳಿ ನಡೆಸಿದೆ.

ವಿಮಾನ ನಿಲ್ದಾಣವೊಂದರಲ್ಲಿ ಅಮೆರಿಕದಲ್ಲಿರುವ ಭಾರತೀಯ ವಿದ್ಯಾರ್ಥಿಗೆ ಕೈಕೋಳ ತೊಡಿಸಿ, ಅವರನ್ನು ನೆಲದ ಮೇಲೆ ಎಳೆದಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಅಲ್ಲದೆ, ವಿಡಿಯೋ ಕುರಿತು ವಿರೋಧ ಹಾಗೂ ಟೀಕೆಗಳೂ ವ್ಯಕ್ತವಾಗುತ್ತಿವೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಅಮೆರಿಕದಲ್ಲಿರುವ ಭಾರತೀಯರನ್ನು ಟ್ರಂಪ್‌ ಸರ್ಕಾರವು ಕೆಟ್ಟದ್ದಾಗಿ ನೆಡೆಸಿಕೊಳ್ಳುತ್ತಿದೆ. ತಕ್ಷಣವೇ ಪ್ರಧಾನಿ ಮೋದಿಯವರು ಈ ಕುರಿತು ಟ್ರಂಪ್‌ ಜೊತೆ ಮಾತನಾಡಿ ವಿಷಯವನ್ನು ತಿಳಿಗೊಳಿಸಬೇಕು ಎಂದು ಆಗ್ರಹಿಸಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪ್ರತಿಕ್ರಿಯಿಸಿರುವ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು, ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತದ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಅವರು, ದೇಶದ ಗೌರವವನ್ನು ಕಾಪಾಡುವುದು ಹಾಗೂ ದೇಶದ ನಾಗರಿಕರ ರಕ್ಷಣೆಯು ಪ್ರಧಾನಿಯವರ ಹೊಣೆಯಾಗಿದೆ. ಆದರೆ, ಮೋದಿ ಸರ್ಕಾರವು ಭಾರತದ ಗೌರವ ಮತ್ತು ಭಾರತೀಯರ ರಕ್ಷಣೆಯ ವಿಷಯದಲ್ಲಿ ನಿರಂತರವಾಗಿ ಸೋಲುತ್ತಿದೆ ಎಂದು ಆರೋಪಿಸಿದ್ದಾರೆ.

ಇತಿಹಾಸದಲ್ಲಿ ಮೊದಲ ಬಾರಿಗೆ, ವಿದೇಶಿ ರಾಷ್ಟ್ರದ ಮುಖ್ಯಸ್ಥರೊಬ್ಬರು ಭಾರತದ ಅನುಪಸ್ಥಿತಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ಮೇಲೆ ಒತ್ತಡ ಹೇರುವ ಮೂಲಕ ಕದನ ವಿರಾಮವನ್ನು ಖಚಿತಪಡಿಸಿಕೊಂಡಿರುವುದಾಗಿ ನಿರಂತರವಾಗಿ ಹೇಳಿಕೊಳ್ಳುತ್ತಿದ್ದಾರೆ,

ಕಳೆದ ಒಂದು ವರ್ಷದಿಂದ ಅಮೆರಿಕದಲ್ಲಿ ಭಾರತೀಯ ನಾಗರಿಕರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಪ್ರಧಾನಿ ಮೋದಿ ಈ ವಿಷಯದ ಕುರಿತು ಮೌನವಹಿಸಿದ್ದಾರೆ. ಅವರಿಗೆ ಈ ವಿಷಯದ ಕುರಿತು ಮಾತನಾಡಲು ಧೈರ್ಯವಿಲ್ಲ ಎನ್ನುವುದನ್ನು ಅವರ ಮೌನವೇ ಸೂಚಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಭಾರತದ ಪ್ರಧಾನಿಯಾಗಿ ಮೋದಿಯವರು ಭಾರತ ಮತ್ತು ಭಾರತೀಯರ ಗೌರವವನ್ನು ರಕ್ಷಿಸುವುದು ಅವರ ಪ್ರಮುಖ ಜವಾಬ್ದಾರಿಯಾಗಿದೆ. ಪ್ರಧಾನಿ ಮೋದಿಯವರು ಈ ಕೂಡಲೇ ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಬೇಕು. ಅಮೆರಿಕದಲ್ಲಿ ಭಾರತೀಯರ ವಿರುದ್ಧ ನಡೆಯುತ್ತಿರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ವಿಮಾನ ನಿಲ್ದಾಣದಲ್ಲಿ ಅಮೆರಿಕಾ ಭಾರತೀಯರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವ ವಿಡಿಯೊ ಹಾಗೂ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಭಾರತೀಯ ವಿದ್ಯಾರ್ಥಿ ಮೇಲೆ ದೌರ್ಜನ್ಯವೆಸಗುತ್ತಿರುವ ಅಮೆರಿಕಾ ಪೊಲೀಸರು.
ಅಮೆರಿಕದ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿ ಕೈಗೆ ಕೋಳ ಹಾಕಿ, ನೆಲಕ್ಕೆ ಕೆಡವಿ ಚಿತ್ರಹಿಂಸೆ: India Embassy ಹೇಳಿದ್ದೇನು?

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com