
ನವದೆಹಲಿ: ತತ್ಕಾಲ್ ಟಿಕೆಟ್‌ಗಳಿಗೆ ನ್ಯಾಯಯುತ ಮತ್ತು ಪಾರದರ್ಶಕ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ, ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಕೆಲವು ಪ್ರಮುಖ ಮಾರ್ಪಾಡುಗಳನ್ನು ಮಾಡಿದೆ.
ಜುಲೈ 1 ರಿಂದ ತತ್ಕಾಲ್ ಟಿಕೆಟ್ ಬುಕ್ ಮಾಡಲು ಆಧಾರ್ ಕಡ್ಡಾಯಗೊಳಿಸಿದ್ದು, ಆಧಾರ್ ದೃಢೀಕೃತ ಬಳಕೆದಾರರು ಮಾತ್ರ ತತ್ಕಾಲ್ ಯೋಜನೆ ಅಡಿಯಲ್ಲಿ ರೈಲು ಟಿಕೆಟ್ ಬುಕ್ ಮಾಡಬಹುದು ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
IRCTC ಯ ಅಧಿಕೃತ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಬುಕ್ ಮಾಡಲಾದ ತತ್ಕಾಲ್ ಟಿಕೆಟ್‌ಗಳು ಆಧಾರ್‌ನೊಂದಿಗೆ ದೃಢೀಕರಿಸಿದ ಬಳಕೆದಾರರಿಗೆ ಮಾತ್ರ ಲಭ್ಯವಿರುತ್ತವೆ ಎಂದು ರೈಲ್ವೆ ಸಚಿವಾಲಯ ಹೇಳಿದೆ.
ಇದಲ್ಲದೆ, ಜುಲೈ 15 ರಿಂದ ಆನ್‌ಲೈನ್‌ನಲ್ಲಿ ಮಾಡುವ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ಗಣಕೀಕೃತ ಪ್ಯಾಸೆಂಜರ್ ರಿಸರ್ವೇಶನ್ ಸಿಸ್ಟಮ್ ಕೌಂಟರ್‌ಗಳಲ್ಲಿ ಮತ್ತು ಅಧಿಕೃತ ಏಜೆಂಟ್‌ಗಳ ಮೂಲಕ ಬುಕ್ ಮಾಡಲಾದ ತತ್ಕಾಲ್ ಟಿಕೆಟ್‌ಗಳು ಬುಕಿಂಗ್ ಸಮಯದಲ್ಲಿ ಬಳಕೆದಾರರು ಒದಗಿಸಿದ ಮೊಬೈಲ್ ಸಂಖ್ಯೆಗೆ OTP ದೃಢೀಕರಣವನ್ನು ಕಳುಹಿಸಬೇಕಾಗುತ್ತದೆ.
ತತ್ಕಾಲ್ ರೈಲು ಟಿಕೆಟ್ ಅನ್ನು ಭಾರತೀಯ ರೈಲ್ವೆ/ಅಧಿಕೃತ ಏಜೆಂಟ್‌ಗಳ ಗಣಿಕೀಕೃತ ಪಿಆರ್‌ಎಸ್(ಪ್ರಯಾಣಿಕರ ಕಾಯ್ದಿರಿಸುವ ವ್ಯವಸ್ಥೆ) ಕೌಂಟರ್ ಮೂಲಕ ಬುಕ್ ಮಾಡಲು ಲಭ್ಯವಿರುತ್ತದೆ. ಆದರೆ, ಟಿಕೆಟ್ ಬುಕ್ ಮಾಡುವ ಸಮಯದಲ್ಲಿ ಬಳಕೆದಾರರು ಒದಗಿಸಿದ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವ ಒಟಿಪಿಯನ್ನು ದೃಢೀಕರಿಸಿದ ಬಳಿಕ ಮಾತ್ರವೇ ಟಿಕೆಟ್ ಬುಕ್ ಮಾಡಲು ಸಾಧ್ಯ. ಇದನ್ನು ಜುಲೈ 15ರಿಂದ ಅನುಷ್ಠಾನಗೊಳಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.
Advertisement