ಕಾಂಗ್ರೆಸ್ ನಿಂದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಸಹೋದರ, ಮಾಜಿ ಶಾಸಕ ಲಕ್ಷ್ಮಣ್ ಸಿಂಗ್ ಉಚ್ಚಾಟನೆ

ಲಕ್ಷ್ಮಣ್ ಸಿಂಗ್ ಅವರು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಸಹೋದರ.
ಲಕ್ಷ್ಮಣ್ ಸಿಂಗ್
ಲಕ್ಷ್ಮಣ್ ಸಿಂಗ್
Updated on

ನವದೆಹಲಿ: "ಪಕ್ಷ ವಿರೋಧಿ ಚಟುವಟಿಕೆ" ಆರೋಪದ ಮೇಲೆ ಮಧ್ಯಪ್ರದೇಶ ಮಾಜಿ ಶಾಸಕ ಲಕ್ಷ್ಮಣ್ ಸಿಂಗ್ ಅವರನ್ನು ಕಾಂಗ್ರೆಸ್ ಬುಧವಾರ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದೆ.

ಲಕ್ಷ್ಮಣ್ ಸಿಂಗ್ ಅವರು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ಸಹೋದರ.

"ಪಕ್ಷ ವಿರೋಧಿ ಚಟುವಟಿಕೆಗಳಿಂದಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮಧ್ಯ ಪ್ರದೇಶದ ಮಾಜಿ ಶಾಸಕ ಲಕ್ಷ್ಮಣ್ ಸಿಂಗ್ ಅವರನ್ನು ಕಾಂಗ್ರೆಸ್ ಅಧ್ಯಕ್ಷರು ಆರು ವರ್ಷಗಳ ಅವಧಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದ್ದಾರೆ" ಎಂದು ಕಾಂಗ್ರೆಸ್ ಶಿಸ್ತು ಕ್ರಿಯಾ ಸಮಿತಿ ಸದಸ್ಯ ಕಾರ್ಯದರ್ಶಿ ತಾರಿಕ್ ಅನ್ವರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಕ್ಷ್ಮಣ್ ಸಿಂಗ್
ಮಧ್ಯಪ್ರದೇಶ ಕಾಂಗ್ರೆಸ್ ಗೆ ಆಘಾತ: ದಿಗ್ವಿಜಯ್ ಸಿಂಗ್ ಆಪ್ತ ಬಿಜೆಪಿ ಸೇರ್ಪಡೆ!

ಯಾವ "ಪಕ್ಷ ವಿರೋಧಿ ಚಟುವಟಿಕೆ" ಆರೋಪದ ಮೇಲೆ ಸಿಂಗ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದನ್ನು ಪ್ರಕಟಣೆಯಲ್ಲಿ ತಿಳಿಸಿಲ್ಲ.

ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಪಿಸಿಸಿ, ಕಾಂಗ್ರೆಸ್ ಹೈಕಮಾಂಡ್ ಗೆ ಶಿಫಾರಸು ಮಾಡಿತ್ತು ಮತ್ತು ಈ ವಿಷಯವನ್ನು ಎಐಸಿಸಿಯ ಶಿಸ್ತು ಕ್ರಿಯಾ ಸಮಿತಿಗೆ ಕಳುಹಿಸಿತ್ತು.

ಸಿಂಗ್ ಮಧ್ಯಪ್ರದೇಶದಿಂದ ಐದು ಬಾರಿ ಸಂಸದರಾಗಿ ಮತ್ತು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವರು 1990 ರಲ್ಲಿ ಮೊದಲ ಬಾರಿಗೆ ರಾಜ್ಯ ವಿಧಾನಸಭೆಗೆ ಆಯ್ಕೆಯಾದರು. 1994 ರಲ್ಲಿ ರಾಜ್‌ಗಢದಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com