
ಕಾಶ್ಮೀರ: ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಚಾಲನೆ ನೀಡಿದ ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಮುಂದಿನ 10 ದಿನಗಳವರೆಗೆ ಬುಕಿಂಗ್ ಪೂರ್ಣಗೊಂಡಿರುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿಸಂಸ್ಥೆ ANI ಜೊತೆ ಮಾತನಾಡಿದ ಮಾತಾ ವೈಷ್ಣೋದೇವಿ ಕತ್ರಾ ರೈಲು ನಿಲ್ದಾಣದ ನಿಲ್ದಾಣದ ಅಧೀಕ್ಷಕ ಜುಗಲ್ ಕಿಶೋರ್ ಶರ್ಮಾ, ರೈಲಿಗೆ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.
"ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ. ಜನರು ತುಂಬಾ ಉತ್ಸುಕರಾಗಿದ್ದಾರೆ. ಮುಂದಿನ 10 ದಿನಗಳವರೆಗೆ ಯಾವುದೇ ಸೀಟುಗಳು ಲಭ್ಯವಿಲ್ಲ ಎಂದು ಶರ್ಮಾ ಹೇಳಿದರು.
ರೈಲು ಅತ್ಯಾಧುನಿಕ ಸೌಲಭ್ಯ ಹೊಂದಿರುವುದರೊಂದಿಗೆ ಪ್ರಸಿದ್ಧ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.
Advertisement