
ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ.
ಹೌದು.. ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ.
ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿತು ಎನ್ನಲಾಗಿದೆ.
ಟೇಕ್ ಆಫ್ ಆಗುತ್ತಿದ್ದಂತೆ ವಿಮಾನ ಪತನವಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ವಿಮಾನದಲ್ಲಿದ್ದ ಪ್ರಯಾಣಿಕರ ಪೈಕಿ ಹಲವು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿಮಾನದ ಪ್ರಕಾರದ ಕುರಿತು ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ. ಘಟನೆ ಮಧ್ಯಾಹ್ನ 1 ರಿಂದ 2 ಗಂಟೆಯ ನಡುವೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಕನಿಷ್ಠ ಒಂದು ಡಜನ್ ಆಂಬ್ಯುಲೆನ್ಸ್‌ಗಳು ಬಂದಿವೆ. ಪೊಲೀಸರು ಆ ಪ್ರದೇಶದಿಂದ ಸಂಚಾರವನ್ನು ಬೇರೆಡೆಗೆ ತಿರುಗಿಸಿದ್ದಾರೆ. ಇದು ಪ್ರಯಾಣಿಕರೋ ಅಥವಾ ಸರಕು ವಿಮಾನವೋ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ವಿಮಾನ ನಿಲ್ದಾಣ ಪ್ರದೇಶದಿಂದ ಕೆಲವು ಜನರನ್ನು ಆಸ್ಪತ್ರೆಗೆ ಕರೆದೊಯ್ಯುವುದನ್ನು ನೋಡಿದ್ದೇವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿಯ ಪ್ರಕಾರ, ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ಸೇರಿದಂತೆ ತುರ್ತು ಸೇವೆಗಳನ್ನು ಅಪಘಾತದ ಸ್ಥಳಕ್ಕೆ ರವಾನಿಸಲಾಗಿದೆ. ಸಾವುನೋವುಗಳು ಅಥವಾ ಅಪಘಾತದ ಕಾರಣ ಸೇರಿದಂತೆ ಹೆಚ್ಚಿನ ವಿವರಗಳು ತಕ್ಷಣ ಲಭ್ಯವಿಲ್ಲ.
ಅಹ್ಮದಾಬಾದ್ ವಿಮಾನ ನಿಲ್ದಾಣ ಸ್ಥಗಿತ
ಇನ್ನು ಏರ್ ಇಂಡಿಯಾ ವಿಮಾನ ಪತನವಾದ ಹಿನ್ನಲೆಯಲ್ಲಿ ಇಂದು ಸಂಜೆ 5 ಗಂಟೆವರೆಗೂ ಅಹ್ಮದಾಬಾದ್ ವಿಮಾನ ನಿಲ್ದಾಣ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಬರುವ ಎಲ್ಲ ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.
Advertisement