Air India Plane Crash: ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕ; Video Viral!

ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು.
Air India Plane Crash: ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕ; Video Viral!
Updated on

ಅಹಮದಾಬಾದ್: ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ನಾಗರಿಕರು, ಓರ್ವ ಕೆನಡಾ ಪ್ರಜೆ ಮತ್ತು ಏಳು ಪೋರ್ಚುಗೀಸ್ ನಾಗರಿಕರು ಹಾಗೂ ವಿಮಾನದ ಸಿಬ್ಬಂದಿ ಸೇರಿದಂತೆ ಒಟ್ಟು 242 ಜನರಿದ್ದು ಎಲ್ಲರೂ ಸಜೀವದಹನವಾಗಿದ್ದಾರೆ. ಆದರೆ ಪವಾಡ ಸದೃಶ್ಯ ಪ್ರಯಾಣಿಕನೊಬ್ಬ ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪಾರಾಗಿದ್ದಾನೆ ಎಂಬ ಸುದ್ದಿ ಬಂದಿದೆ. ವಿಮಾದಲ್ಲಿ 11ಎ ಸೀಟ್ ನಲ್ಲಿ ಕುಳಿತಿದ್ದ ರಮೇಶ್ ಎಂಬಾತ ಬದುಕುಳಿದ ಅದೃಷ್ಠವಂತ. ರಮೇಶ್ ಬದುಕಿದ ಬಗ್ಗೆ ಹಿರಿಯ ಪೊಲೀಸರು ಮಾಹಿತಿ ನೀಡಿದ್ದಾರೆ.

Air India Plane Crash: ವಿಮಾನದ ಎಮೆರ್ಜೆನ್ಸಿ ವಿಂಡೋದಿಂದ ಜಿಗಿದು ಪ್ರಾಣ ಉಳಿಸಿಕೊಂಡ ಪ್ರಯಾಣಿಕ; Video Viral!
Air India Plane Crash: ಏರ್ ಇಂಡಿಯಾ ವಿಮಾನದ ಕೋ-ಪೈಲೆಟ್ ಕನ್ನಡಿಗ; 1100 ಗಂಟೆಗಳ ಹಾರಾಟ ಅನುಭವ!

ಗುಜರಾತ್ ರಾಜಧಾನಿ ಅಹಮದಾಬಾದ್ ಏರ್​ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿದೆ. ಏರ್​ಪೋರ್ಟ್ ಬಳಿ ಮೇಧಿನಿ ನಗರ್​ನಲ್ಲಿ ಈ ಘಟನೆ ಸಂಭವಿಸಿದ್ದು ಬೋಯಿಂಗ್ 787-8 ಡ್ರೀಮ್‌ಲೈನರ್ (AI-171) ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು ಎನ್ನಲಾಗಿದೆ. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್ ಮೆಸ್ ಮೇಲೆ ಬಿದ್ದಿದೆ.

246 ಮಂದಿ ಸಾವು

ಈ ದುರಂತದಲ್ಲಿ ಒಟ್ಟು 246 ಮಂದಿ ಸಾವಿಗೀಡಾಗಿದ್ದು, ಈ ಪೈಕಿ 229 ವಿಮಾನ ಪ್ರಯಾಣಿಕರು, 10 ಮಂದಿ ವಿಮಾನ ಸಿಬ್ಬಂದಿ, ಇಬ್ಬರು ಪೈಲಟ್ ( ಮುಖ್ಯ ಪೈಲಟ ಸುಮಿತ್ ಸಭರ್ವಾಲ್ ಮತ್ತು ಕೋ ಪೈಲಟ್ ಕ್ಲೈವ್‌ ಕುಂದರ್‌) ಗಳು ಸೇರಿದ್ದರು. ವಿಮಾನದಲ್ಲಿದ್ದ 242 ಜನರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಇದ್ದರು ಎಂದು ತಿಳಿದುಬಂದಿದೆ. ಇದಲ್ಲದೆ ವಿಮಾನ ಢಿಕ್ಕಿಯಾದ ಬಿಜೆ ವೈದ್ಯಕೀಯ ಕಾಲೇಜಿನ 5 ಮಂದಿ ಹಾಸ್ಟೆಲ್ ವಿದ್ಯಾರ್ಥಿಗಳೂ ಸಾವನ್ನಪ್ಪಿದ್ದಾರೆ. ದುರಂತ ನಡೆದ ಸಂದರ್ಭದಲ್ಲಿ ವಿಮಾನ ಕೇವಲ 825 ಅಡಿ ಎತ್ತರದಲ್ಲಿತ್ತು ಎನ್ನಲಾಗಿದೆ.

ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ

ಇದೇ ದುರಂತದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವಿಜಯ್ ರೂಪಾನಿ ಅವರು ಕುಟುಂಬ ಸದಸ್ಯರ ಭೇಟಿ ಮಾಡಲು ಲಂಡನ್ ತೆರಳುತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com