Patna: ಬಿಜೆಪಿ ಧ್ವಜವಿದ್ದ ಸ್ಕಾರ್ಪಿಯೋ ಕಾರು ಪೊಲೀಸರಿಗೆ ಡಿಕ್ಕಿ; ಮಹಿಳಾ ಪೇದೆ ಸಾವು!

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಳೆದ ಮಧ್ಯರಾತ್ರಿ ಪೊಲೀಸರ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಧ್ವಜವಿದ್ದ ಸ್ಕಾರ್ಪಿಯೋ ವಾಹನ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಮಹಿಳಾ ಪೇದೆಯೊಬ್ಬರು ಸಾವನ್ನಪ್ಪಿದ್ದು ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಇತರ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಅಪಘಾತ ದೃಶ್ಯ
ಅಪಘಾತ ದೃಶ್ಯ
Updated on

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಳೆದ ಮಧ್ಯರಾತ್ರಿ ಪೊಲೀಸರ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಧ್ವಜವಿದ್ದ ಸ್ಕಾರ್ಪಿಯೋ ವಾಹನ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಮಹಿಳಾ ಪೇದೆಯೊಬ್ಬರು ಸಾವನ್ನಪ್ಪಿದ್ದು ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಇತರ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಈ ಅಪಘಾತಕ್ಕೂ ಯಾವುದೇ ಬಿಜೆಪಿ ನಾಯಕನಿಗೂ ಸಂಬಂಧವಿಲ್ಲ ಬಿಜೆಪಿ ರಾಜ್ಯ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಧ್ವಜ ವಾಹನದ ಮೇಲೆ ಏಕೆ ಇತ್ತು. ಅದನ್ನು ಯಾರು ಹಾಕಿದ್ದರು ಎಂಬುದು ತನಿಖೆಯ ವಿಷಯವಾಗಿದೆ ಎಂದರು.

ಬಿಹಾರ ಬಿಜೆಪಿ ಅಧ್ಯಕ್ಷ ದಿಲೀಪ್ ಜೈಸ್ವಾಲ್ ಅವರನ್ನು ಈ ಅಪಘಾತದ ಬಗ್ಗೆ ಪ್ರಶ್ನೆ ಕೇಳಲಾಯಿತು. ಈ ಅಪಘಾತವು ತುಂಬಾ ದುಃಖಕರವಾಗಿದೆ ಎಂದು ಅವರು ಹೇಳಿದರು. ಪೊಲೀಸರು ಈ ವಿಷಯವನ್ನು ತನಿಖೆ ಮಾಡುತ್ತಿದ್ದಾರೆ. ಡಿಕ್ಕಿ ಹೊಡೆದ ಸ್ಕಾರ್ಪಿಯೋ ಕಾರಿನ ಮೇಲೆ ಬಿಜೆಪಿ ಧ್ವಜವನ್ನು ಯಾರು ಮತ್ತು ಏಕೆ ಹಾಕಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಆದರೆ ಯಾವುದೇ ಬಿಜೆಪಿ ನಾಯಕರು ಇದರಲ್ಲಿ ಭಾಗಿಯಾಗಿಲ್ಲ ಎಂದು ಅವರು ಹೇಳಿದರು.

ಪಾಟ್ನಾದ ಅಟಲ್ ಪಾತ್‌ನಲ್ಲಿ ರಾತ್ರಿ 12:30 ರ ಸುಮಾರಿಗೆ ಈ ಘಟನೆ ನಡೆದಿದೆ. ಕರ್ತವ್ಯದಲ್ಲಿದ್ದ ಪೊಲೀಸರು ವಾಹನವನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದರು. ಆಗ ವೇಗವಾಗಿ ಬಂದ ಸ್ಕಾರ್ಪಿಯೋ ಅವರಿಗೆ ಡಿಕ್ಕಿ ಹೊಡೆದಿದೆ. ಇದರಲ್ಲಿ ಮಹಿಳಾ ಕಾನ್‌ಸ್ಟೆಬಲ್ ಕೋಮಲ್ ಕುಮಾರಿ, ಇನ್ಸ್‌ಪೆಕ್ಟರ್ ದೀಪಕ್ ಕುಮಾರ್ ಮತ್ತು ಜಮದಾರ್ ಅವಧೇಶ್ ಕುಮಾರ್ ಗಂಭೀರವಾಗಿ ಗಾಯಗೊಂಡರು. ಮೂವರನ್ನೂ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಕಾನ್‌ಸ್ಟೆಬಲ್ ಕೋಮಲ್ ಕುಮಾರ್ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಅಪಘಾತ ದೃಶ್ಯ
Air India ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ: ತಾನು ಬದುಕಿದ್ದೇಗೆ? ಇಂಚಿಂಚು ಮಾಹಿತಿ ನೀಡಿದ ರಮೇಶ್ ವಿಶ್ವಾಸ್!

ಈ ಪ್ರಕರಣದಲ್ಲಿ ವಾಹನದ ಮಾಲೀಕರು ಮತ್ತು ಚಾಲಕ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಅವರೆಲ್ಲರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com