NEET-UG 2025 ಫಲಿತಾಂಶ ಪ್ರಕಟ: ರಾಜಸ್ತಾನದ ಮಹೇಶ್ ಕುಮಾರ್ ಮೊದಲ ರ‍್ಯಾಂಕ್, 12.36 ಲಕ್ಷ ವಿದ್ಯಾರ್ಥಿಗಳು ಅರ್ಹ

ರಾಜಸ್ಥಾನದ ಮಹೇಶ್ ಕುಮಾರ್ ಅಖಿಲ ಭಾರತ ಮಟ್ಟದಲ್ಲಿ ಟಾಪರ್ ಆಗಿ ಹೊರಹೊಮ್ಮಿದರೆ, ಮಧ್ಯಪ್ರದೇಶದ ಉತ್ಕರ್ಷ್ ಅವಧಿಯಾ ಎರಡನೇ ಸ್ಥಾನ ಪಡೆದಿದ್ದಾರೆ.
FILE | Aspirants wait to appear for the NEET UG exam, in Bengaluru
ಬೆಂಗಳೂರಿನಲ್ಲಿ ನೀಟ್ ಆಕಾಂಕ್ಷಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ದಿನದ ಸಂದರ್ಭ
Updated on

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶನಿವಾರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET-UG) 2025 ರ ಪದವಿ (NEET-UG) ಫಲಿತಾಂಶಗಳನ್ನು ಪ್ರಕಟಿಸಿದೆ. 12.36 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.

ರಾಜಸ್ಥಾನದ ಮಹೇಶ್ ಕುಮಾರ್ ಅಖಿಲ ಭಾರತ ಮಟ್ಟದಲ್ಲಿ ಟಾಪರ್ ಆಗಿ ಹೊರಹೊಮ್ಮಿದರೆ, ಮಧ್ಯಪ್ರದೇಶದ ಉತ್ಕರ್ಷ್ ಅವಧಿಯಾ ಎರಡನೇ ಸ್ಥಾನ ಪಡೆದಿದ್ದಾರೆ. ದೆಹಲಿಯ ಅವಿಕಾ ಅಗರ್ವಾಲ್ ಮಹಿಳಾ ವಿಭಾಗದಲ್ಲಿ ಟಾಪರ್ ಆಗಿ ಹೊರಹೊಮ್ಮಿ ಒಟ್ಟಾರೆಯಾಗಿ ಐದನೇ ಸ್ಥಾನ ಗಳಿಸಿದ್ದಾರೆ.

FILE | Aspirants wait to appear for the NEET UG exam, in Bengaluru
NEET UG 2025: ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಿದ NTA

NEET UG 2025 ಫಲಿತಾಂಶ ವೀಕ್ಷಿಸುವುದು ಹೇಗೆ?

  • NEET ಅಧಿಕೃತ ವೆಬ್‌ಸೈಟ್‌ neet.nta.nic.in ನ್ನು ತೆರೆಯಿರಿ.

  • ‘NEET UG 2025 ಫಲಿತಾಂಶ’ ಎಂದು ಹೇಳುವ ಲಿಂಕ್ ನ್ನು ಕ್ಲಿಕ್ ಮಾಡಿ

  • ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

  • ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ

  • ಅದನ್ನು ಡೌನ್ ಲೋಡ್ ಮಾಡಿಕೊಂಡು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com