
ತೆಲಂಗಾಣ: ಐವರು ಹದಿಹರೆಯದ ಯುವಕರು ಗೋದಾವರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕರೀಂ ನಗರದ ಬಸರಾ ಬಳಿ ಭಾನುವಾರ ನಡೆದಿದೆ.
ಪ್ರಸಿದ್ಧ ಜ್ಞಾನ ಸರಸ್ವತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಹೈದರಾಬಾದಿನಿಂದ ಬಸರಾಕ್ಕೆ ಸುಮಾರು ಜನರ ತಂಡವು ಬಸರಾಕ್ಕೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇವಾಲಯಕ್ಕೆ ತೆರಳುವ ಮುನ್ನಾ ಐವರು ಹದಿಹರೆಯದ ಯುವಕರು ಗೋದಾವರಿ ನದಿಯಲ್ಲಿ ಪವಿತ್ರ ಸ್ನಾನ ಮಾಡುವಾಗ ಇದ್ದಕ್ಕಿಂತ ನೀರಿನ ಮಟ್ಟದಲ್ಲಿ ಹೆಚ್ಚಾಗಿದ್ದು, ಆ ಯುವಕರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಭೈಂಸಾದ ಸಹಾಯಕ ಪೊಲೀಸ್ ಅಧೀಕ್ಷಕ ಅವಿನಾಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ನಂತರ ರಕ್ಷಣಾ ತಂಡಗಳು ಐವರನ್ನು ಹೊರತೆಗೆದು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಗೆ ಆಗಮಿಸುವ ಮುನ್ನವೇ ಐವರೂ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಧಿಕಾರಿಗಳು ಅಧಿಕೃತ ವರದಿಗಾಗಿ ಕಾಯುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement