ತಾಂತ್ರಿಕ ದೋಷ ಶಂಕೆ: ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಹಾಂಗ್ ಕಾಂಗ್‌ಗೆ ವಾಪಸ್

ವಿಮಾನವು ಹಾಂಗ್ ಕಾಂಗ್ ನಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
Air India Plane
ಏರ್ ಇಂಡಿಯಾ ವಿಮಾನ
Updated on

ಮುಂಬೈ: ಹಾಂಗ್ ಕಾಂಗ್ ನಿಂದ ಸೋಮವಾರ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಪೈಲಟ್, ತಾಂತ್ರಿಕ ದೋಷದ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಮಧ್ಯದ್ಯದಲ್ಲಿಯೇ ವಾಪಸ್ ಆಗಿ ಹಾಂಗ್ ಕಾಂಗ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಮಾನವು ಹಾಂಗ್ ಕಾಂಗ್ ನಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ವಿಮಾನವು ಹಾಂಗ್ ಕಾಂಗ್ ನಿಂದ ಬೆಳಗ್ಗೆ 9.50ಕ್ಕೆ(ಭಾರತೀಯ ಕಾಲಮಾನ) ಟೇಕಾಫ್ ಆಯಿತು ಮತ್ತು ದೆಹಲಿಯಲ್ಲಿ ಇಂದು ಮಧ್ಯಾಹ್ನ 12: 20ಕ್ಕೆ ಲ್ಯಾಂಡ್ ಆಗಬೇಕಿತ್ತು.

Air India Plane
Air India Plane Crash: ವಿಮಾನ ದುರಂತಕ್ಕೆ ಕಾರಣ ತಿಳಿಯಲು ಪಾರದರ್ಶಕ ತನಿಖೆ; ಏರ್ ಇಂಡಿಯಾ ಮುಖ್ಯಸ್ಥ ಭರವಸೆ

ಕಳೆದ ಜೂನ್ 12 ರಂದು ಮಧ್ಯಾಹ್ನ 1:39 ಕ್ಕೆ ಅಹಮದಾಬಾದ್ ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿನಗರದ ವೈದ್ಯಕೀಯ ಕಾಲೇಜಿನ ಆವರಣಕ್ಕೆ ಅಪ್ಪಳಿಸಿತ್ತು. ಈ ದುರಂತದಲ್ಲಿ ವಿಮಾನದಲ್ಲಿದ್ದ 242 ಜನರಲ್ಲಿ 241 ಜನ ಮತ್ತು ಕೆಳಗಡೆ ಇದ್ದ 29 ಜನ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com