
ನಾಗ್ಪುರ: ನಾಗ್ಪುರ ಜಿಲ್ಲೆಯ ಔಷಧ ಕಂಪನಿಯ ಘಟಕದಲ್ಲಿ ಮಂಗಳವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೂರ್ವ ಮಹಾರಾಷ್ಟ್ರದ ಭಿಲ್ಗಾಂವ್‌ನಲ್ಲಿರುವ ಅಂಕಿತ್ ಪಲ್ಪ್ಸ್ ಮತ್ತು ಬೋರ್ಡ್ಸ್ ಪ್ರೈವೇಟ್ ಲಿಮಿಟೆಡ್‌ನ ಘಟಕದ ರಿಯಾಕ್ಟರ್‌ನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.
ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದಾರೆ.
ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಮತ್ತು ಪ್ರಸ್ತುತ ಹತ್ತಿರದ ಕ್ಯಾಂಪ್ಟೀ ಪಟ್ಟಣದ ಆಸ್ಪತ್ರೆಯಲ್ಲಿ ಇತರರೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
Advertisement