ಸೋನಿಯಾ ಗಾಂಧಿ ಅವರು ದಾಖಲಾಗಿರುವ ದೆಹಲಿಯ ಗಂಗಾರಾಮ್ ಆಸ್ಪತ್ರೆ
ಸೋನಿಯಾ ಗಾಂಧಿ ಅವರು ದಾಖಲಾಗಿರುವ ದೆಹಲಿಯ ಗಂಗಾರಾಮ್ ಆಸ್ಪತ್ರೆ

ಸೋನಿಯಾ ಗಾಂಧಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ, ಡಿಸ್ಚಾರ್ಜ್ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಆಸ್ಪತ್ರೆ

78 ವರ್ಷದ ಕಾಂಗ್ರೆಸ್ ನಾಯಕಿಯನ್ನು ಭಾನುವಾರ ಸಂಜೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Published on

ನವದೆಹಲಿ: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಆದರೆ ಅವರ ಡಿಸ್ಚಾರ್ಜ್ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ ಎಂದು ಆಸ್ಪತ್ರೆ ಮಂಗಳವಾರ ತಿಳಿಸಿದೆ.

78 ವರ್ಷದ ಕಾಂಗ್ರೆಸ್ ನಾಯಕಿಯನ್ನು ಭಾನುವಾರ ಸಂಜೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.

"ಸೋನಿ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಅವರು ಹೊಟ್ಟೆಯ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆಹಾರಕ್ರಮವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಅವರು ಇನ್ನೂ ವೀಕ್ಷಣೆಯಲ್ಲಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ, ಅವರ ಡಿಸ್ಚಾರ್ಜ್ ದಿನಾಂಕವನ್ನು ಇನ್ನೂ ನಿರ್ಧರಿಸಿಲ್ಲ" ಎಂದು ಆಸ್ಪತ್ರೆಯ ಅಧ್ಯಕ್ಷ ಅಜಯ್ ಸ್ವರೂಪ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಅವರು ದಾಖಲಾಗಿರುವ ದೆಹಲಿಯ ಗಂಗಾರಾಮ್ ಆಸ್ಪತ್ರೆ
ಆರೋಗ್ಯದಲ್ಲಿ ಏರುಪೇರು: ಶಿಮ್ಲಾ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದ ಸೋನಿಯಾ ಗಾಂಧಿ

"ನಮ್ಮ ವೈದ್ಯರ ತಂಡ, ಡಾ. ಎಸ್. ನುಂಡಿ ಮತ್ತು ಡಾ. ಅಮಿತಾಭ್ ಯಾದವ್ ಅವರು, ಸೋನಿಯಾ ಗಾಂಧಿ ಅವರ ಆರೋಗ್ಯ ಮತ್ತು ಆಹಾರಕ್ರಮವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ.

ತಪಾಸಣೆಗೆ ಎರಡು ದಿನಗಳ ಮೊದಲು, ಅವರು ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ(ಐಜಿಎಂಸಿ) ಕೆಲವು ಪರೀಕ್ಷೆಗಳಿಗೆ ಒಳಗಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com