ಆಗಸ್ಟ್ 15ರಿಂದ ಖಾಸಗಿ ವಾಹನಗಳಿಗೆ FASTag ಆಧಾರಿತ ವಾರ್ಷಿಕ ಪಾಸ್: ಶುಲ್ಕ, ನಿಯಮಗಳು ಹೀಗಿದೆ...

ವಾರ್ಷಿಕ ಪಾಸ್ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಮತ್ತು ವೆಚ್ಚ-ಪರಿಣಾಮಕಾರಿ ಪ್ರಯಾಣವನ್ನು ಸಕ್ರಿಯಗೊಳಿಸುತ್ತದೆ ಎಂದರು.
Representational image
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ನಾಗರಿಕರಿಗೆ ಹೆದ್ದಾರಿ ಪ್ರಯಾಣಕ್ಕೆ ಅನುಕೂಲವಾಗುವಂತೆ ಖಾಸಗಿ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಆಗಸ್ಟ್ 15 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪಾಸ್ ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್‌ಗಳವರೆಗೆ, ಯಾವುದು ಮೊದಲು ಬರುತ್ತದೆಯೋ ಅದಕ್ಕೆ ನಿಯಮ ಮಾನ್ಯವಾಗಿರುತ್ತದೆ. ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳ ಸಂಚಾರಕ್ಕೆ ಮಾತ್ರ ಈ ಪಾಸ್ ಅನ್ವಯವಾಗುತ್ತದೆ ಎಂದರು.

ವಾರ್ಷಿಕ ಪಾಸ್ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜನರಿಗೆ ಸುಗಮ ಮತ್ತು ವೆಚ್ಚ-ಪರಿಣಾಮಕಾರಿ ಪ್ರಯಾಣವನ್ನು ಒದಗಿಸುತ್ತದೆ ಎಂದರು.

ಈ ಪಾಸ್ ಗೆ ಸಂಬಂಧಿಸಿದ ಲಿಂಕ್ ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಿರುತ್ತದೆ. 60 ಕಿಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ಪ್ರಯಾಣಿಕರ ದೀರ್ಘಕಾಲದ ಸಮಸ್ಯೆಗಳು ಈ ನೀತಿಯು ಪರಿಹರಿಸುತ್ತದೆ. ಒಂದೇ, ಕೈಗೆಟುಕುವ ವಹಿವಾಟಿನ ಮೂಲಕ ಟೋಲ್ ಪಾವತಿಗಳನ್ನು ಸರಳಗೊಳಿಸುತ್ತದೆ ಎಂದು ಹೇಳಿದರು.

ಈ ಪಾಸ್ ನಿಂದ ಟೋಲ್ ಪ್ಲಾಜಾದಲ್ಲಿ ಕಾಯುವ ಸಮಯವನ್ನು ಕಡಿಮೆ ಮಾಡುವುದು, ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ವಿವಾದಗಳನ್ನು ಬಗೆಹರಿಸುತ್ತದೆ. ವಾರ್ಷಿಕ ಪಾಸ್ ಲಕ್ಷಾಂತರ ಖಾಸಗಿ ವಾಹನ ಮಾಲೀಕರಿಗೆ ವೇಗವಾದ ಮತ್ತು ಸುಗಮ ಪ್ರಯಾಣದ ಅನುಭವವನ್ನು ನೀಡುವ ಗುರಿ ಹೊಂದಿದೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com