
ಕಂಕೇರ್: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳಾ ನಕ್ಸಲೈಟ್ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ನಡೆಸುತ್ತಿದ್ದಾಗ ಛೋಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಬೆಟ್ಟದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಕಂಕೇರ್ ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ತಿಳಿಸಿದ್ದಾರೆ.
ಕೊಟ್ರಿ ನದಿಯ ಇನ್ನೊಂದು ಬದಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಸದಸ್ಯರು ಇರುವ ಬಗ್ಗೆ ಬಂದ ಮಾಹಿತಿ ಆಧಾರದ ಮೇಲೆ ಅಮಟೋಲಾ ಮತ್ತು ಕಲ್ಪರ್ ಗ್ರಾಮಗಳ ನಡುವೆ ಕೂಂಬಿಂಗ್ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಸ್ಥಳದಿಂದ ಮಹಿಳಾ ನಕ್ಸಲೈಟ್ ಮೃತದೇಹ ಮತ್ತು ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ, ಆದರೆ ಇನ್ನೂ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದರು. ಹೆಚ್ಚಿನ ವಿವರಗಳನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement