
ನಾಗ್ಪುರ: ಪ್ರಪಂಚದಾದ್ಯಂತ ಯೋಗ ದಿನವನ್ನು ಆಚರಿಸುವುದು ಭಾರತದ ದೊಡ್ಡ ಸಾಧನೆ ಮತ್ತು ಹೆಮ್ಮೆಯ ವಿಷಯ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶನಿವಾರ ತಿಳಿಸಿದರು.
ಅಂತರರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ನಾಗ್ಪುರ ಮಹಾನಗರ ಪಾಲಿಕೆ, ಜಿಲ್ಲಾಡಳಿತ ಮತ್ತು ಕೇಂದ್ರ ಸಾಂಸ್ಕೃತಿಕ ಸಚಿವಾಲಯವು ಇಲ್ಲಿನ ಯಶವಂತ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಡ್ಕರಿ ಭಾಗವಹಿಸಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕ್ಕೆ ಅನುಕೂಲವಾಗುತ್ತದೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಗೆ ಪ್ರಸ್ತಾವನೆಯನ್ನು ಮಂಡಿಸಿದ್ದಕ್ಕೆ ನನಗೆ ಸಂತೋಷವಾಗಿದೆ' ಎಂದರು.
'ಪ್ರಧಾನಿ ಮೋದಿಯವರ ಪ್ರಯತ್ನದಿಂದ ಯೋಗವನ್ನು ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಇಂದು ಪ್ರಪಂಚದಾದ್ಯಂತ ದೊಡ್ಡ ಪ್ರಮಾಣದಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತಿದ್ದು, ಇದು ನಮಗೆ ದೊಡ್ಡ ಸಾಧನೆ ಮತ್ತು ಹೆಮ್ಮೆಯ ವಿಷಯ' ಎಂದು ಹೇಳಿದರು.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಯೋಗ ಪ್ರದರ್ಶನ ನೀಡಿದರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರೆಲ್ಲರೂ ವ್ಯಸನ ಮುಕ್ತಿಯ ಪ್ರತಿಜ್ಞೆ ಸ್ವೀಕರಿಸಿದರು.
Advertisement