International Yoga Day: ವಿಶ್ವ ದಾಖಲೆಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ!

yoga for one health one earth ಎಂಬ ಥೀಮ್‌ನೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಆಂಧ್ರಪ್ರದೇಶ ಸರ್ಕಾರದ ಆಶ್ರಯದಲ್ಲಿ ಯೋಗ ಆಂಧ್ರ 2025 ಎಂಬ ಹೆಸರಿನಲ್ಲಿ ಆಯೋಜಿಸಲಾಗುತ್ತಿದೆ.
PM Modi Attends Mega Yoga Event At Visakhapatnam
ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ
Updated on

ವಿಶಾಖಪಟ್ಟಣಂ: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಈ ಕಾರ್ಯಕ್ರಮ ವಿಶ್ವ ದಾಖಲೆಯ ಸ್ಥಾಪನೆಯತ್ತ ದಾಪುಗಾಲಿರಿಸಿದೆ.

11ನೇ ಅಂತರರಾಷ್ಟ್ರೀಯ ಯೋಗ ದಿನ (2025) ಸಾಗರದ ಕರಾವಳಿಯಲ್ಲಿರುವ ವಿಶಾಖಪಟ್ಟಣಂನಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ ಸ್ವತಃ ಈ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

yoga for one health one earth ಎಂಬ ಥೀಮ್‌ನೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಆಂಧ್ರಪ್ರದೇಶ ಸರ್ಕಾರದ ಆಶ್ರಯದಲ್ಲಿ ಯೋಗ ಆಂಧ್ರ 2025 ಎಂಬ ಹೆಸರಿನಲ್ಲಿ ಆಯೋಜಿಸಲಾಗುತ್ತಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್, ಸಚಿವ ನಾರಾ ಲೋಕೇಶ್, ಇತರ ಸಾರ್ವಜನಿಕ ಪ್ರತಿನಿಧಿಗಳು, ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸರ್ಕಾರಿ ನೌಕರರು, ಶಾಲಾ ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್ ಸ್ವಯಂಸೇವಕರು, ಯೋಗ ಸಂಘಗಳು, ನೌಕಾಪಡೆ, ಕೋಸ್ಟ್ ಗಾರ್ಡ್ ಸದಸ್ಯರು ಮತ್ತು ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

PM Modi Attends Mega Yoga Event At Visakhapatnam
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಯೋಗ ದಿನ: “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ”

ಅದ್ದೂರಿ ಆಚರಣೆ

ಆಂಧ್ರ ಪ್ರದೇಶ ಸರ್ಕಾರವು ಅಂತಾರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದು, ಗಿನ್ನೆಸ್ ವಿಶ್ವ ದಾಖಲೆ ಸೇರಿದಂತೆ ಹಲವು ದಾಖಲೆಗಳನ್ನು ಸ್ಥಾಪಿಸುವ ಗುರಿಯೊಂದಿಗೆ ಈ ಆಚರಣೆಯನ್ನು ವಿಶ್ವದ ಅತಿದೊಡ್ಡ ಯೋಗ ಕೂಟಗಳಲ್ಲಿ ಒಂದೆಂದು ಬಿಂಬಿಸಲಾಗುತ್ತಿದೆ.

ಶನಿವಾರ ಅಂದರೆ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿಶಾಖಪಟ್ಟಣಂನ ರಾಮಕೃಷ್ಣ ಬೀಚ್‌ನಿಂದ ಭೋಗಪುರಂವರೆಗಿನ ಸುಮಾರು 26 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯೋಗದಿನಾಚಾರಣೆ ಪ್ರಾರಂಭವಾಗಿದ್ದು, ಈ ಕಾರ್ಯಕ್ರಮದಲ್ಲಿ ಸುಮಾರು ಐದು ಲಕ್ಷ ಜನರು ಏಕಕಾಲದಲ್ಲಿ ಯೋಗ ಮಾಡುತ್ತಿದ್ದಾರೆ.

326 ಗೊತ್ತುಪಡಿಸಿದ ವಿಭಾಗಗಳಲ್ಲಿ ತಲಾ ಸುಮಾರು 1,000 ಯೋಗದಲ್ಲಿ ಭಾಗವಹಿಸುವವರು ಇರುತ್ತಾರೆ. ಅಂತೆಯೇ ಯೋಗ ಭಾಗವಹಿಸುವವರನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆತರಲು 3,000 ಕ್ಕೂ ಹೆಚ್ಚು ಬಸ್‌ಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಿಗಿ ಭದ್ರತೆ

ಈ ಬೃಹತ್ ಕಾರ್ಯಕ್ರಮಕ್ಕೆ ಬೃಹತ್ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, 10,000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಡೀ ಮಾರ್ಗದಲ್ಲಿ 1,200 ಸಿಸಿಟಿವಿ ಕ್ಯಾಮೆರಾಗಳು ಮತ್ತು ಡ್ರೋನ್ ಮೇಲ್ವಿಚಾರಣೆಯ ಮೂಲಕ ಕಣ್ಗಾವಲು ನಿರ್ವಹಿಸಲಾಗುತ್ತಿದೆ. ವಿಶೇಷವಾಗಿ ಪ್ರಧಾನಿಯವರ ಉಪಸ್ಥಿತಿಯ ಹಿನ್ನೆಲೆಯಲ್ಲಿ, ಕಾರ್ಯಕ್ರಮದ ಭದ್ರತೆಯನ್ನು ಸಂಘಟಿಸಲು ಅತ್ಯಾಧುನಿಕ ನಿಯಂತ್ರಣ ಕೊಠಡಿಯನ್ನು ಸಹ ಸ್ಥಾಪಿಸಲಾಗಿದೆ.

ಭಾರತದ ಮೃದು ಶಕ್ತಿಯ ದೊಡ್ಡ ಗುರುತುಗಳಲ್ಲಿ ಒಂದಾಗಿರುವ ಶಿಸ್ತನ್ನು ಆಚರಿಸಲು ಸಾವಿರಾರು ಯೋಗ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸಲಾಗಿದೆ, ಇದು ಲಕ್ಷಾಂತರ ಜನರು ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಪ್ರಪಂಚಗಳ ನಡುವೆ ಸಮತೋಲನವನ್ನು ತರಲು ಸಹಾಯ ಮಾಡುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com