
ಶಿಮ್ಲಾ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.
8 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳು ಕಿರುಕುಳದ ಬಗ್ಗೆ ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದ ನಂತರ ಈ ವಿಚಾರ ಬೆಳಕಿಗೆ ಬಂದಿದ್ದು, ಶಾಲಾ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ.
ಶಿಕ್ಷಕ ತಮ್ಮನ್ನು ಅನುಚಿತವಾಗಿ ಮುಟ್ಟಿದ್ದಾರೆ ಎಂದು ಆರೋಪಿಸಿ 24 ವಿದ್ಯಾರ್ಥಿಗಳು ಶುಕ್ರವಾರ ಪ್ರಾಂಶುಪಾಲರಿಗೆ ಲಿಖಿತ ದೂರು ನೀಡಿದ್ದಾರೆ. ನಂತರ ದೂರನ್ನು ಶಾಲೆಯ ಲೈಂಗಿಕ ಕಿರುಕುಳ ವಿರೋಧಿ ಸಮಿತಿಗೆ ರವಾನಿಸಲಾಗಿದೆ ಎಂದು ಶಾಲಾ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ, ವಿದ್ಯಾರ್ಥಿಗಳ ಪೋಷಕರನ್ನು ಸಭೆಗೆ ಕರೆಯಲಾಗಿತ್ತು ಮತ್ತು ಅವರಲ್ಲಿ ಹೆಚ್ಚಿನವರಿಗೆ ತಮ್ಮ ಮಕ್ಕಳು ಎದುರಿಸುತ್ತಿರುವ ಕಿರುಕುಳದ ಬಗ್ಗೆ ತಿಳಿದಿರಲಿಲ್ಲ ಎಂಬುದು ಕಂಡುಬಂದಿದೆ ಎಂದು ಅವರು ಹೇಳಿದರು.
ಸದ್ಯ ಶಿಕ್ಷಕನನ್ನು ಬಂಧಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Advertisement