ಭಾರತ, ಪಾಕಿಸ್ತಾನ ಜುಲೈ 24ರವರೆಗೆ ವಾಯುಪ್ರದೇಶ ನಿರ್ಬಂಧ ಮುಂದುವರಿಕೆ!

ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ರಾತ್ರಿ ಇದನ್ನು ಅಧಿಕೃತವಾಗಿ ಘೋಷಿಸಿದೆ.
Casual Images
ಸಾಂದರ್ಭಿಕ ಚಿತ್ರ
Updated on

ಇಸ್ಲಾಮಾಬಾದ್: ಭಾರತೀಯ ವಿಮಾನಗಳ ಮೇಲಿನ ವಾಯುಪ್ರದೇಶ ನಿರ್ಬಂಧವನ್ನು ಮತ್ತೊಂದು ತಿಂಗಳು ವಿಸ್ತರಿಸಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟು ನೀಡಿದೆ. ಜುಲೈ 24ರ ಬೆಳಗ್ಗೆ 5-29ರವರೆಗೂ ಪಾಕಿಸ್ತಾನದ ವಿಮಾನಗಳಿಗೆ ವಾಯು ಪ್ರದೇಶವನ್ನು ವಿಸ್ತರಿಸಿದೆ.

ನಾಗರಿಕ ವಿಮಾನಯಾನ ಸಚಿವಾಲಯ ಸೋಮವಾರ ರಾತ್ರಿ ಇದನ್ನು ಅಧಿಕೃತವಾಗಿ ಘೋಷಿಸಿದೆ. ಭಾರತ ಕೂಡಾ ಜುಲೈ 24ರ ಬೆಳಗ್ಗೆ 5-29ರವರೆಗೂ ಪಾಕಿಸ್ತಾನದ ವಿಮಾನಗಳಿಗೆ ವಾಯು ಪ್ರದೇಶ ನಿರ್ಬಂಧವನ್ನು ವಿಸ್ತರಿಸಲು ನಿರ್ಧರಿಸಿದೆ ಎಂದು ಹೇಳಿದೆ.

ಇದಕ್ಕೂ ಮುನ್ನಾ ಪಾಕಿಸ್ತಾನ ಇದೇ ದಿನದವರೆಗೂ ಭಾರತದ ವಿಮಾನಗಳಿಗೆ ತನ್ನ ವಾಯುಪ್ರದೇಶ ನಿರ್ಭಂದವನ್ನು ವಿಸ್ತರಿಸಿರುವುದಾಗಿ ಘೋಷಿಸಿತ್ತು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಏಪ್ರಿಲ್ 23 ರಂದು ಒಂದು ತಿಂಗಳ ಕಾಲ ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಪಾಕಿಸ್ತಾನ ನಿರ್ಬಂಧಿಸಿತ್ತು.

ನಂತರ, ಮೇ 7 ರಂದು ಭಾರತ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿ, ಪಾಕಿಸ್ತಾನ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ್ದರಿಂದ ನಾಲ್ಕು ದಿನಗಳ ಸಂಘರ್ಷದಿಂದಾಗಿ ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದ್ದರಿಂದ ಮೇ 23 ರಂದು ಅದನ್ನು ಮತ್ತೊಂದು ತಿಂಗಳು ವಿಸ್ತರಿಸಲಾಯಿತು.

Casual Images
ಭಾರತೀಯ ವಿಮಾನಗಳಿಗೆ ವಾಯುಪ್ರದೇಶ ನಿರ್ಬಂಧ ಇನ್ನೊಂದು ತಿಂಗಳು ವಿಸ್ತರಿಸಿದ ಪಾಕ್

ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರವು ಹೊರಡಿಸಿದ ನೋಟಾಮ್ ಅಥವಾ ವಾಯುಪಡೆಗಳಿಗೆ ಸೂಚನೆಯ ಪ್ರಕಾರ, ನಿಷೇಧವನ್ನು ಜೂನ್ 23 ರಿಂದ ಜುಲೈ 23 ರವರೆಗೆ ವಿಸ್ತರಿಸಲಾಗಿದೆ. ಭಾರತೀಯ ನೋಂದಾಯಿತ ವಿಮಾನಗಳು ಮತ್ತು ಮಿಲಿಟರಿ ವಿಮಾನಗಳು ಸೇರಿದಂತೆ ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳು/ನಿರ್ವಾಹಕರು ನಿರ್ವಹಿಸುವ/ಮಾಲೀಕತ್ವದ ಅಥವಾ ಗುತ್ತಿಗೆ ಪಡೆದ ವಿಮಾನಗಳಿಗೆ ಪಾಕಿಸ್ತಾನ ವಾಯುಪ್ರದೇಶ ಲಭ್ಯವಿಲ್ಲ" ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com