ತುರ್ತು ಪರಿಸ್ಥಿತಿ ವಿರೋಧಿ ಚಳವಳಿ ನನಗೆ ಕಲಿಕೆಯ ಅನುಭವವಾಗಿತ್ತು: ಪ್ರಧಾನಿ ಮೋದಿ

"ಪ್ರಜಾಪ್ರಭುತ್ವದ ಆದರ್ಶಗಳಿಗಾಗಿ" ಮೋದಿಯವರ ಹೋರಾಟವನ್ನು ಎತ್ತಿ ತೋರಿಸುವ 'ದಿ ಎಮರ್ಜೆನ್ಸಿ ಡೈರೀಸ್ - ಇಯರ್ಸ್ ದಟ್ ಫೋರ್ಜ್ಡ್ ಎ ಲೀಡರ್' ನ್ನು ಬ್ಲೂಕ್ರಾಫ್ಟ್ ಪ್ರಕಟಿಸಿದೆ.
PM Narendra Modi
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ದೇಶಕ್ಕೆ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಪರಿಸ್ಥಿತಿಯ ಕುರಿತಾದ ಪುಸ್ತಕ ಬಿಡುಗಡೆಗೂ ಮುನ್ನ, ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರಸ್ತಾಪಿಸಿದ್ದು, ಈ ಅವಧಿ ತಮಗೆ ಕಲಿಕೆಯ ಅನುಭವ ಎಂದು ಹೇಳಿದ್ದು, ಪ್ರಜಾಪ್ರಭುತ್ವ ಚೌಕಟ್ಟನ್ನು ಸಂರಕ್ಷಿಸುವ ಚೈತನ್ಯವನ್ನು ಪುನರುಚ್ಚರಿಸಿದ್ದಾರೆ.

"ಪ್ರಜಾಪ್ರಭುತ್ವದ ಆದರ್ಶಗಳಿಗಾಗಿ" ಮೋದಿಯವರ ಹೋರಾಟವನ್ನು ಎತ್ತಿ ತೋರಿಸುವ 'ದಿ ಎಮರ್ಜೆನ್ಸಿ ಡೈರೀಸ್ - ಇಯರ್ಸ್ ದಟ್ ಫೋರ್ಜ್ಡ್ ಎ ಲೀಡರ್' ನ್ನು ಬ್ಲೂಕ್ರಾಫ್ಟ್ ಪ್ರಕಟಿಸಿದೆ. ಇದನ್ನು ಇಂದು ಸಂಜೆ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಲಿದ್ದಾರೆ.

ತುರ್ತು ಪರಿಸ್ಥಿತಿಯ ವರ್ಷಗಳಲ್ಲಿನ ಅವರ ಪ್ರಯಣವನ್ನು ಪುಸ್ತಕವು ವಿವರಿಸುತ್ತದೆ ಎಂದು ಮೋದಿ ಹೇಳಿದರು. "ಇದು ಆ ಕಾಲದ ಅನೇಕ ನೆನಪುಗಳನ್ನು ಮರಳಿ ತರುತ್ತದೆ. ತುರ್ತು ಪರಿಸ್ಥಿತಿಯ ಆ ಕರಾಳ ದಿನಗಳನ್ನು ನೆನಪಿಸಿಕೊಳ್ಳುವ ಎಲ್ಲರೂ ಅಥವಾ ಆ ಸಮಯದಲ್ಲಿ ತುರ್ತು ಪರಿಸ್ಥಿತಿ ಅನುಭವಿಸಿದ ಕುಟುಂಬಗಳು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ನಾನು ಕರೆ ನೀಡುತ್ತೇನೆ. ಇದು 1975 ರಿಂದ 1977 ರವರೆಗಿನ ಅವಧಿಯ ಸಮಯದ ಯುವಕರಲ್ಲಿ ಜಾಗೃತಿ ಮೂಡಿಸುತ್ತದೆ ಎಂದರು.

ಆ ಅವಧಿಯಲ್ಲಿ ತಾವು ಯುವ ಆರ್‌ಎಸ್‌ಎಸ್ ಪ್ರಚಾರಕನಾಗಿದ್ದೆ. ತುರ್ತುಸ್ಥಿತಿ ವಿರೋಧಿ ಚಳವಳಿ ನನಗೆ ಒಂದು ಕಲಿಕೆಯ ಅನುಭವವಾಗಿತ್ತು. ಇದು ನಮ್ಮ ಪ್ರಜಾಪ್ರಭುತ್ವ ಚೌಕಟ್ಟನ್ನು ಸಂರಕ್ಷಿಸುವ ಚೈತನ್ಯವನ್ನು ಪುನರುಚ್ಚರಿಸಿತು. ಅದೇ ಸಮಯದಲ್ಲಿ, ರಾಜಕೀಯ ವರ್ಣಪಟಲದಾದ್ಯಂತದ ಜನರಿಂದ ನಾನು ಬಹಳಷ್ಟು ಕಲಿಯಲು ಸಾಧ್ಯವಾಯಿತು ಎಂದು ಹೇಳಿದರು.

ಬ್ಲೂಕ್ರಾಫ್ಟ್ ಡಿಜಿಟಲ್ ಫೌಂಡೇಶನ್ ಆ ಅನುಭವಗಳಲ್ಲಿ ಕೆಲವನ್ನು ಪುಸ್ತಕದ ರೂಪದಲ್ಲಿ ಸಂಗ್ರಹಿಸಿದೆ. ಅದರ ಮುನ್ನುಡಿಯನ್ನು ಸ್ವತಃ ತುರ್ತುಸ್ಥಿತಿ ವಿರೋಧಿ ಚಳವಳಿಯ ಪ್ರಮುಖರಾದ ಹೆಚ್ ಡಿ ದೇವೇಗೌಡರು ಬರೆದಿದ್ದಾರೆ ಎಂದು ಪ್ರಧಾನಿ ತಿಳಿಸಿದ್ದಾರೆ.

PM Narendra Modi
'ಅಘೋಷಿತ ತುರ್ತು ಪರಿಸ್ಥಿತಿ@11': ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ತಿರುಗೇಟು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com