
ಕೋಲ್ಕತ್ತ: ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಶುಕ್ರವಾರ ಬಂಧಿಸಲಾಗಿದೆ.
ಜೂನ್ 25 ರ ಸಂಜೆ 7:30 ರಿಂದ 8:50 ರ ನಡುವೆ ಘಟನೆ ನಡೆದಿದೆ ಎಂದು ದಿ ಟೆಲಿಗ್ರಾಫ್' ವರದಿ ಮಾಡಿದೆ. ಗುರುವಾರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 25 ರಂದು ಕೋಲ್ಕತ್ತದ ಕಸ್ಬಾದಲ್ಲಿ ಈ ಘಟನೆ ನಡೆದಿತ್ತು. ಬಂಧಿತ ಮೂವರಲ್ಲಿ ಇಬ್ಬರು ಅದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಒಬ್ಬ ಹಳೆಯ ವಿದ್ಯಾರ್ಥಿ ಎನ್ನಲಾಗಿದೆ.
ಹಳೆಯ ವಿದ್ಯಾರ್ಥಿಯೇ ಪ್ರಮುಖ ಆರೋಪಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.
Advertisement