ಉತ್ತರ ಪ್ರದೇಶ: ಇಟಾವಾದಲ್ಲಿ ಗಲಭೆ, ಉದ್ವಿಗ್ನತೆ; ಪೊಲೀಸರ ಮೇಲೆ ಕಲ್ಲು ತೂರಾಟ, 20 ಮಂದಿ ಬಂಧನ

ಗಲಭೆ ಸಂಬಂಧ 20 ವ್ಯಕ್ತಿಗಳನ್ನು ಬಂಧಿಸಲಾಗಿದ್ದು, 13 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
 upper caste men tonsuring the religious preacher
ಭಗವತ್ ಕಥಾ ಬೋಧಕನಿಗೆ ಕಲ್ಲೇಟಿನ ಚಿತ್ರ
Updated on

ಇಟಾವಾ/ಲಖನೌ: ಉತ್ತರ ಪ್ರದೇಶದ ಇಟವಾ ಜಿಲ್ಲೆಯ ದಂಡರ್‌ಪುರ ಗ್ರಾಮದಲ್ಲಿ ಇತ್ತೀಚಿಗೆ ನಡೆದಿದ್ದ ಭಗವತ್ ಕಥಾ ಬೋಧಕ ಮತ್ತು ಅವರ ಆಪ್ತರವನ್ನು ಜಾತಿ ಆಧಾರಿತವಾಗಿ ಥಳಿಸಿದ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಸಂತ್ರಸ್ತರ ವಿರುದ್ಧ ದಾಖಲಾದ ಪ್ರಕರಣವನ್ನು ಹಿಂಪಡೆಯುವಂತೆ ಒತ್ತಾಯಿಸಿ ಯಾದವ ಗುಂಪುಗಳ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದ್ದರಿಂದ ಉದ್ವಿಗ್ನತೆ ಹೆಚ್ಚಾಯಿತು.

ಆಗ್ರಾ-ಕಾನ್ಪುರ್ ಹೆದ್ದಾರಿಯ ಬಳಿ ಮತ್ತು ಬಕೇವಾರ್ ಪ್ರದೇಶದ ಹಳ್ಳಿಯಲ್ಲಿ ಗುಂಪು ಗುಂಪಾಗಿ ಜನ ಸೇರಿದ್ದರು. ಕಿರಿದಾದ ರಸ್ತೆಯಲ್ಲಿ ಪ್ರತಿಭಟನಾಕಾರರನ್ನು ಎಚ್ಚರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದಾಗ ಅಪರಿಚಿತ ವ್ಯಕ್ತಿಗಳು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಗಲಭೆಗೆ ಜಾತಿ ಹಣೆಪಟ್ಟಿ ಕಟ್ಟಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಉತ್ತರ ಪ್ರದೇಶ ಸಚಿವ ಜೈವೀರ್ ಸಿಂಗ್ ಅವರು ಆರೋಪಿಸಿದ್ದಾರೆ.

ಗಲಭೆ ಸಂಬಂಧ 20 ವ್ಯಕ್ತಿಗಳನ್ನು ಬಂಧಿಸಲಾಗಿದ್ದು, 13 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈಗ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದ್ದು ಪರಿಸ್ಥಿತಿ ಸಹಜವಾಗಿದೆ ಎಂದು ಇಟಾವಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಬ್ರಿಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.

 upper caste men tonsuring the religious preacher
ನನ್ನ ಸರ್ಕಾರದ ಆಡಳಿತಾವಧಿ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಯೋಗಿ ಆದಿತ್ಯನಾಥ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com