
ಕೋಲ್ಕತ್ತಾ: ಈ ವಾರದ ಆರಂಭದಲ್ಲಿ ಕೋಲ್ಕತ್ತಾ ಕಾನೂನು ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗೆ ಪೊಲೀಸರು ಶನಿವಾರ ಐದು ಸದಸ್ಯರ ವಿಶೇಷ ತನಿಖಾ ತಂಡ(SIT) ರಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐದು ಸದಸ್ಯರ SITಗೆ ಸಹಾಯಕ ಆಯುಕ್ತರ ಶ್ರೇಣಿಯ ಅಧಿಕಾರಿಯೊಬ್ಬರು ನೇತೃತ್ವ ವಹಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
"ಕಾನೂನು ವಿದ್ಯಾರ್ಥಿನಿ ಮೇಲೆ ಹಿರಿಯ ವಿದ್ಯಾರ್ಥಿಗಳು ನಡೆಸಿದ ಸಾಮೂಹಿಕ ಅತ್ಯಾಚಾರದ ಪ್ರಕರಣದ ತನಿಖೆಗಾಗಿ SIT ರಚಿಸಲಾಗಿದೆ. ಅದು ತಕ್ಷಣವೇ ತನಿಖೆ ಪ್ರಾರಂಭಿಸುತ್ತದೆ" ಎಂದು ಅಧಿಕಾರಿ ತಿಳಿಸಿದ್ದಾರೆ.
ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನ 24 ವರ್ಷದ ವಿದ್ಯಾರ್ಥಿನಿ ಮೇಲೆ ಜೂನ್ 25 ರಂದು ಸಂಜೆ ಅದೇ ಕಾಲೇಜಿನ ಹಳೆಯ ವಿದ್ಯಾರ್ಥಿ ಸೇರಿದಂತೆ ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಂಡ ಪೊಲೀಸರು ಪ್ರಮುಖ ಆರೋಪಿ ಮನೋಜಿತ್ ಮಿಶ್ರಾ, ಪ್ರಮಿತ್ ಮುಖರ್ಜಿ ಮತ್ತು ಜೈದ್ ಅಹ್ಮದ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಶನಿವಾರ ಬೆಳಗ್ಗೆ ಕಾಲೇಜಿನ ಗಾರ್ಡ್ ಅನ್ನು ಸಹ ಬಂಧಿಸಲಾಗಿದೆ.
Advertisement