
ಔರಂಗಾಬಾದ್: ಮೇಘಾಲಯದ ಹನಿಮೂನ್ ಹತ್ಯೆ ಪ್ರಕರಣ ಮಾಸುವ ಮುನ್ನವೇ, ಬಿಹಾರದ ಔರಂಗಾಬಾದ್ ಜಿಲ್ಲೆಯ ಮಹಿಳೆಯೊಬ್ಬರು ತನ್ನ ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಜೂನ್ 25 ರಂದು ಬಂದೇಯಾ ಪೊಲೀಸ್ ಠಾಣೆ ವ್ಯಾಪ್ತಿಯ ಅಮೌನಾ ಗ್ರಾಮದ ಹೊಲದಲ್ಲಿ ಪತಿ ಬಿಕ್ಕುವಿನ ಶವ ಪತ್ತೆಯಾದ ನಂತರ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪಿಟಿಐ ಜೊತೆ ಮಾತನಾಡಿದ ದೌದ್‌ನಗರ(ಔರಂಗಾಬಾದ್) ಉಪ-ವಿಭಾಗೀಯ ಪೊಲೀಸ್ ಅಧಿಕಾರಿ(SDPO) ಕುಮಾರ್ ರಿಷಿರಾಜ್, "ಜೂನ್ 21 ರಂದು ಪತ್ತೆಯಾಗಿರುವ ಶವದಲ್ಲಿ ಗಾಯದ ಗುರುತುಗಳಿವೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಾಥಮಿಕ ತನಿಖೆ ಮತ್ತು ಮೃತ ಕುಟುಂಬ ಸದಸ್ಯರ ಹೇಳಿಕೆಗಳ ಪ್ರಕಾರ ಬಿಕ್ಕುವನ್ನು ಕೊಲೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
ಮೃತನ ಪತ್ನಿ ತನ್ನ ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಲೆ ಮಾಡಿದ್ದಾರೆ ಎಂದು ತನಿಖಾ ತಂಡಕ್ಕೆ ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ.
"ಜೂನ್ 25 ರಂದು ಮಹಿಳೆಯನ್ನು ಬಂಧಿಸಲಾಗಿದೆ ಮತ್ತು ಆಕೆ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಈ ಸಂಚನ್ನು ಮಹಿಳೆ ಮತ್ತು ಅವಳ ಪ್ರೇಮಿ ಇಬ್ಬರೂ ಕಾರ್ಯಗತಗೊಳಿಸಿದ್ದಾರೆ" ಎಂದು SDPO ತಿಳಿಸಿದ್ದಾರೆ.
ಮಹಿಳೆಯನ್ನು ಬಂಧಿಸಲಾಗಿದ್ದು, ಆಕೆ ಪ್ರಿಯಕರನನ್ನು ಬಂಧಿಸಲು ಶೋಧ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
Advertisement