ಆಪರೇಷನ್ ಸಿಂಧೂರ್ ವೇಳೆ ಭಾರತದ 'ಜೆಟ್'ಗಳು ಧ್ವಂಸ: ವಾಯುಸೇನೆ ಅಧಿಕಾರಿ ಹೇಳಿಕೆ; ಕೇಂದ್ರದ ವಿರುದ್ಧ ಕಾಂಗ್ರೆಸ್ ಕಿಡಿ! Video

ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲು ಪ್ರಧಾನಿ ನರೇಂದ್ರ ಮೋದಿ ಯಾಕೆ ನಿರಾಕರಿಸುತ್ತಿದ್ದಾರೆ ಮತ್ತು ಸಂಸತ್ತಿನ ವಿಶೇಷ ಅಧಿವೇಶನದ ಬೇಡಿಕೆಯನ್ನು ಏಕೆ ತಿರಸ್ಕರಿಸಲಾಗಿದೆ
Jairam Ramesh
ಜೈರಾಮ್ ರಮೇಶ್
Updated on

ನವದೆಹಲಿ: ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತೀಯ ವಾಯುಪಡೆಯು ಜೆಟ್ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಧ್ವಂಸಗೊಳಿಸಿದೆ. ರಾಜಕೀಯ ನಾಯಕತ್ವ ನಿರ್ಬಂಧ ಹೇರಿದ್ದರಿಂದಲೇ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಇಂಡೋನೇಷ್ಯಾದಲ್ಲಿರುವ ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಸರ್ಕಾರ ದೇಶದ ಜನರ ಹಾದಿ ತಪ್ಪಿಸುತ್ತಿದೆ ಎಂದು ಆರೋಪ ಮಾಡಿದೆ.

ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲು ಪ್ರಧಾನಿ ನರೇಂದ್ರ ಮೋದಿ ಯಾಕೆ ನಿರಾಕರಿಸುತ್ತಿದ್ದಾರೆ ಮತ್ತು ಸಂಸತ್ತಿನ ವಿಶೇಷ ಅಧಿವೇಶನದ ಬೇಡಿಕೆಯನ್ನು ಏಕೆ ತಿರಸ್ಕರಿಸಲಾಗಿದೆ ಎಂದು ಪಕ್ಷವು ಕೇಳಿದೆ.

ಇತ್ತೀಚೆಗಷ್ಟೇ ಇಂಡೋನೇಷ್ಯಾದಲ್ಲಿ ನಡೆದ ಸೆಮಿನಾರ್‌ವೊಂದರಲ್ಲಿ ಮಾತನಾಡಿದ ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಶಿವಕುಮಾರ್, ಪಾಕಿಸ್ತಾನದ ಉಗ್ರರ ತಾಣಗಳನ್ನು ಗುರಿಯಾಗಿಸಿದ್ದ ಮೇ 7, 2025ರ ರಾತ್ರಿ ಭಾರತೀಯ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಹೊಡೆದುರುಳಿಸಿದೆ ಎಂದು ಹೇಳಿದ್ದರು.

ಈ ಕುರಿತ ಮಾಧ್ಯಮವೊಂದರ ವರದಿಯನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹಂಚಿಕೊಂಡಿದ್ದಾರೆ. ಕ್ಯಾಪ್ಟನ್ ಶಿವಕುಮಾರ್ ಹೇಳಿದ್ದಾರೆ ಎನ್ನಲಾದ ಹೇಳಿಕೆ ಬಗ್ಗೆ ಸರ್ಕಾರ ಅಥವಾ ರಕ್ಷಣಾ ಸಂಸ್ಥೆಯಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಆದಾಗ್ಯೂ, ಶಿವಕುಮಾರ್ ಅವರ ಹೇಳಿಯ ಮಾಧ್ಯಮ ವರದಿಗಳನ್ನು ಗಮನಿಸಿದ್ದು, ಅವರ ಹೇಳಿಕೆಯ ಉದ್ದೇಶವನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಯಿಸಿವೆ ಎಂದು ಇಂಡೋನೇಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಪಷ್ಪಪಡಿಸಿದೆ. ಆದಾಗ್ಯೂ, ಸರ್ಕಾರದ ಪಾರದರ್ಶಕೆಯನ್ನು ಕಾಂಗ್ರೆಸ್ ಪ್ರಶ್ನಿಸುವುದನ್ನು ಮುಂದುವರೆಸಿದೆ.

ಮೊದಲು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಸಿಂಗಾಪುರದಲ್ಲಿ ಈ ಮಹತ್ವದ ವಿಷಯ ಹಂಚಿಕೊಂಡಿದ್ದರು. ಈಗ ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಇಂಡೋನೇಷ್ಯಾದಲ್ಲಿ ಈ ವಿಷಯ ಹಂಚಿಕೊಂಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಯಾಕೆ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ವ ಪಕ್ಷ ಸಭೆ ಅಧ್ಯಕ್ಷತೆ ವಹಿಸುತ್ತಿಲ್ಲ? ವಿಶೇಷ ಸಂಸತ್ ಅಧಿವೇಶನದ ಬೇಡಿಕೆಯನ್ನು ನಿರಾಕರಿಸಿದ್ದಾರೆ ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಆಪರೇಷನ್ ಸಿಂಧೂರ್ ವೇಳೆಯಲ್ಲಿ ಭಾರತೀಯ ವಾಯುಪಡೆಗಳ ನಷ್ಟ ಕುರಿತು ಮಾಹಿತಿ ಬಹಿರಂಗಪಡಿಸುವಲ್ಲಿ ಹಿಂದೇಟು ಹಾಕುವ ಮೂಲಕ ಸರ್ಕಾರ ದೇಶದ ಜನರನ್ನು ಹಾದಿ ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಪವನ್ ಖೇರಾ ಆರೋಪಿಸಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ನಡುವಣ ನಾಲ್ಕು ದಿನಗಳ ತೀವ್ರ ಸೇನಾ ಸಂಘರ್ಷದ ನಂತರ ಮೇ 10 ರಂದು ಕದನ ವಿರಾಮ ಒಪ್ಪಂದ ಜಾರಿಯಾಗಿತ್ತು.

Jairam Ramesh
ಭಾರತೀಯ ಜೆಟ್ ಗಳು ಧ್ವಂಸ?: ನಾವು ಯುದ್ಧತಂತ್ರದ ತಪ್ಪುಗಳನ್ನು ಅರ್ಥ ಮಾಡಿಕೊಂಡೆವು- ಪಾಕ್ ದಾಳಿಯಿಂದ ಹಾನಿ ಒಪ್ಪಿಕೊಂಡ್ರಾ CDS Anil Chauhan

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com