ಐಷಾರಾಮಿ ಕಾರು, ಚಿನ್ನ ನೀಡಿದ ಬಳಿಕವೂ ಇನ್ನಷ್ಟು ವರದಕ್ಷಿಣೆಗೆ ಪೀಡನೆ; ನವವಿವಾಹಿತೆ ಆತ್ಮಹತ್ಯೆ

ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮಾರ್ಗಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ.
Newly wed women commits
ಆತ್ಮಹತ್ಯೆಗೆ ಶರಣಾದ ನವವಿವಾಹಿತೆonline desk
Updated on

ತಿರುಪ್ಪೂರ್: ವರದಕ್ಷಿಣೆ ಪಿಡುಗು ಇನ್ನೂ ಜೀವಂತವಾಗಿದ್ದು, ತಮಿಳುನಾಡಿ ತಿರುಪ್ಪೂರ್ ನಲ್ಲಿ ಓರ್ವ ಯುವತಿ ಪತಿಯ ಮನೆಯಲ್ಲಿ ಕಿರುಕುಳ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಏಪ್ರಿಲ್ ನಲ್ಲಿ ಕವಿನ್ ಕುಮಾರ್ (28) ಎಂಬಾತನೊಂದಿಗೆ ವಿವಾಹವಾಗಿದ್ದ ರಿಧನ್ಯಾ (27) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆಯಾಗಿದ್ದಾರೆ.

ಮೊಂಡಿಪಾಳ್ಯಂದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತಿಳಿಸಿ, ಮಾರ್ಗಮಧ್ಯೆ ಕಾರು ನಿಲ್ಲಿಸಿ, ಕೀಟನಾಶ ಸೇವಿಸಿದ್ದಾರೆ. ಬಹಳ ಹೊತ್ತಿನಿಂದ ಒಂದೇ ಪ್ರದೇಶದಲ್ಲಿ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದಾಗ ಆಕೆಯ ಶವ ಪತ್ತೆಯಾಗಿದೆ. ಜೊತೆಗೆ ಬಾಯಿಯಲ್ಲಿ ನೊರೆ ಬಂದಿರುವುದನ್ನು ಕಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಮಹಿಳೆ ಗಾರ್ಮೆಂಟ್ಸ್ ಕಂಪನಿಯನ್ನು ನಡೆಸುತ್ತಿರುವ ಅಣ್ಣಾದೊರೈ ಅವರ ಮಗಳು ಎಂದು ತಿಳಿದುಬಂದಿದೆ.

Newly wed women commits
ಬೆಂಗಳೂರು: ಆಸ್ತಿ ವಿವಾದ; ಮಗಳನ್ನು ಬೆನ್ನಿಗೆ ಕಟ್ಟಿಕೊಂಡು ಕೃಷಿ ಹೊಂಡಕ್ಕೆ ಬಿದ್ದು ತಾಯಿ ಆತ್ಮಹತ್ಯೆ!

ರಿಧನ್ಯಾ ಸಾಯುವ ಮುನ್ನ ತನ್ನ ತಂದೆಗೆ ವಾಟ್ಸಾಪ್‌ನಲ್ಲಿ ವಾಯ್ಸ್ ಮೆಸೇಜ್‌ಗಳನ್ನು ಕಳುಹಿಸಿದ್ದಾರೆ. ಮೆಸೇಜ್‌ನಲ್ಲಿ ನನ್ನ ಈ ನಿರ್ಧಾರಕ್ಕಾಗಿ ಕ್ಷಮಿಸಿ, ಪ್ರತಿದಿನ ನನ್ನ ಪತಿ, ಅತ್ತೆ ಹಾಗೂ ಮಾವ ನೀಡುತ್ತಿರುವ ಕಿರುಕುಳ ತಾಳಲಾಗದೇ ಈ ನಿರ್ಧಾರವನ್ನು ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. 70 ಲಕ್ಷ ರೂ. ಮೌಲ್ಯದ ಕಾರು, 800 ಗ್ರಾಂ ಚಿನ್ನ ನೀಡಿದ ಬಳಿಕವೂ ವರದಕ್ಷಿಣೆಗಾಗಿ ಪತಿಯ ಮನೆಯವರು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com