ಛತ್ತೀಸ್‌ಗಢ: ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ; ಇಬ್ಬರು ನಕ್ಸಲರು ಹತ

ಕಿಸ್ತಾರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೈಟ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಸ್ತಾರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೈಟ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಹೇಳಿದ್ದಾರೆ.

ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಶುಕ್ರವಾರ ಪ್ರಾರಂಭಿಸಲಾದ ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ಮತ್ತು ಕೋಬ್ರಾ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಅವರು ತಿಳಿಸಿದರು.

ಸಾಂದರ್ಭಿಕ ಚಿತ್ರ
ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಎಂಟು ನಕ್ಸಲರು ಬಲಿ

ಎನ್‌ಕೌಂಟರ್ ಸ್ಥಳದಿಂದ ಇಲ್ಲಿಯವರೆಗೆ ಇಬ್ಬರು ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಆ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಎನ್‌ಕೌಂಟರ್‌ನೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ 83 ನಕ್ಸಲರು ಹತ್ಯೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com