
ಇಂಫಾಲ: ಮಣಿಪುರದಲ್ಲಿ ಬುಧವಾರ 5. 7 ತೀವ್ರತೆಯ ಪ್ರಬಲ ಭೂಕಂಪನ ಸೇರಿದಂತೆ ಸತತ ಎರಡು ಬಾರಿ ಭೂಮಿ ಕಂಪಿಸಿದೆ. ಮಣಿಪುರದ ಈಶಾನ್ಯ ಭಾಗದಲ್ಲಿ ಈ ಕಂಪನಗಳು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 11.06ಕ್ಕೆ ರಾಜ್ಯದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಭೂಕಂಪನದ ಕೇಂದ್ರಬಿಂದು ಇಂಫಾಲ್ ಪೂರ್ವ ಜಿಲ್ಲೆಯ ಯೈರಿಪೋಕ್‌ನಿಂದ ಪೂರ್ವಕ್ಕೆ 44 ಕಿಮೀ ಮತ್ತು 110 ಕಿಮೀ ಆಳದಲ್ಲಿ ಪತ್ತೆಯಾಗಿದೆ ಎಂದು ಶಿಲ್ಲಾಂಗ್‌ನ ಪ್ರಾದೇಶಿಕ ಭೂಕಂಪನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಅಸ್ಸಾಂ, ಮೇಘಾಲಯ ಮತ್ತು ಈ ಪ್ರದೇಶದ ಇತರ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ಹೇಳಿದರು.
ಮಣಿಪುರದಲ್ಲಿ ಮಧ್ಯಾಹ್ನ 12.20ಕ್ಕೆ 4.1 ತೀವ್ರತೆಯ ಎರಡನೇ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ರಾಜ್ಯದ ಕಾಮ್‌ಜಾಂಗ್ ಜಿಲ್ಲೆಯಲ್ಲಿ 66 ಕಿಮೀ ಆಳದಲ್ಲಿ ಪತ್ತೆಯಾಗಿದೆ ಎಂದು ಅವರು ಹೇಳಿದರು.
ಭೂಕಂಪದ ನಂತರ ಮಣಿಪುರದ ಹಲವು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.
ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪನದ ವಿಡಿಯೋಗಳನ್ನು ಹಂಚಿಕೊಳ್ಳಲಾಗಿದ್ದು, ತೌಬಲ್ ಜಿಲ್ಲೆಯ ವಾಂಗ್‌ಜಿಂಗ್ ಲ್ಯಾಮ್‌ಡಿಂಗ್‌ನಲ್ಲಿ ಜನಾಂಗೀಯ ಕಲಹದ ಜನರಿಗೆ ಪರಿಹಾರ ಶಿಬಿರವನ್ನು ನಡೆಸುತ್ತಿರುವ ಶಾಲಾ ಕಟ್ಟಡದಲ್ಲಿ ಬಿರುಕುಗಳನ್ನು ತೋರಿಸಿದೆ.
ಭೂಕಂಪದಿಂದಾಗಿ ಉಂಟಾಗಿರುವ ಹಾನಿಯ ಬಗ್ಗೆ ವರದಿಗಳನ್ನು ಪರಿಶೀಲಿಸುತ್ತಿದ್ದೇವೆ. ಈ ಪ್ರದೇಶದ ಇತರ ರಾಜ್ಯಗಳಲ್ಲಿ ಈವರೆಗೆ ಯಾವುದೇ ಹಾನಿಯಾಗಿರುವ ಕುರಿತು ವರದಿಯಾಗಿಲ್ಲ ಎಂದು ಇಂಫಾಲ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement