Rahul Gandhi
ರಾಹುಲ್ ಗಾಂಧಿ

ಬಿಜೆಪಿ ಪರ ಕೆಲಸ ಮಾಡುವ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ವಾರ್ನಿಂಗ್!

2027 ರ ಗುಜರಾತ್ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಆ ರಾಜ್ಯಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಪಕ್ಷದ ರಾಜ್ಯ ಘಟಕದಲ್ಲಿ ಪ್ರಮುಖ ಬದಲಾವಣೆ ತರುವ ಸುಳಿವು ನೀಡಿದ್ದಾರೆ.
Published on

ಅಹಮದಾಬಾದ್: ಬಿಜೆಪಿ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶನಿವಾರ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಪರ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಪಕ್ಷದಿಂದ ಹೊರಗಿಡುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಗುಜರಾತ್ ಭೇಟಿಯ ಎರಡನೇ ದಿನವಾದ ಇಂದು ಅಹಮದಾಬಾದ್ ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರಲ್ಲಿರುವ ಎರಡು ಗುಂಪುಗಳನ್ನು ಬೇರ್ಪಡಿಸುವುದು ಪಕ್ಷದ ಮೊದಲ ಕೆಲಸ ಎಂದರು.

ಕಾಂಗ್ರೆಸ್ ನ ಸಿದ್ದಾಂತವನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು, ಸದಾ ಸಾರ್ವಜನಿಕರೊಂದಿಗೆ ನಿಲ್ಲುವವರು ಒಂದು ಗುಂಪಿನಲ್ಲಿದ್ದಾರೆ. ಸಾರ್ವಜನಿಕರಿಂದ ಸಂಪರ್ಕ ಕಡಿದುಕೊಂಡ ಮತ್ತೊಂದು ಗುಂಪು ಬಿಜೆಪಿ ಜೊತೆಗಿದ್ದಾರೆ ಎಂದು ಹೇಳಿದರು.

ಕಠಿಣ ಕ್ರಮ ಕೈಗೊಂಡರೂ ಸಹ ಅಂತಹ ನಾಯಕರನ್ನು ಪಕ್ಷದಿಂದ ಹೊರಗಿಡುವುದು, ಈ ಗುಂಪುಗಳನ್ನು ಬೇರ್ಪಡಿಸುವುದು ಪಕ್ಷದ ಮೊದಲ ಕೆಲಸವಾಗಬೇಕು. ಈ ಗುಂಪುಗಳು ಬೇರೆ ಬೇರೆಯಾಗುವವರೆಗೂ ಗುಜರಾತ್ ಜನರು ಪಕ್ಷವನ್ನು ನಂಬುವುದಿಲ್ಲ ಎಂದು ಅವರು ಸ್ಪಷ್ಪಪಡಿಸಿದರು.

Rahul Gandhi
ರಾಹುಲ್ ಗೆ ಅವಮಾನಿಸಿದ್ದ ಜಗ್ಗಿ ವಾಸುದೇವ್, Amit shah ಜೊತೆ ವೇದಿಕೆ ಹಂಚಿಕೆ; ಇದೆಲ್ಲಾ ಸರಿ ಅಲ್ಲ... DK Shivakumar ಗೆ ಹೈಕಮಾಂಡ್ ವಾರ್ನಿಂಗ್!

2027 ರ ಗುಜರಾತ್ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಆ ರಾಜ್ಯಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಪಕ್ಷದ ರಾಜ್ಯ ಘಟಕದಲ್ಲಿ ಪ್ರಮುಖ ಬದಲಾವಣೆ ತರುವ ಸುಳಿವು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com