
ಹೈದರಾಬಾದ್: ತೆಲಂಗಾಣದ ನಾಗರ್ ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆ (SLBC)ಸುರಂಗ ಕುಸಿತದ ಘಟನೆಯಲ್ಲಿ ನಾಪತ್ತೆಯಾಗಿರುವ ಕಾರ್ಮಿಕರ ಪತ್ತೆಗೆ ರೋಬೋಟ್‌ಗಳನ್ನು ನಿಯೋಜಿಸಲಾಗುವುದು ಎಂದು ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ಹೇಳಿದ್ದಾರೆ.
ನಾಪತ್ತೆಯಾದವರ ಕುಟುಂಬಗಳೊಂದಿಗೆ ಸರ್ಕಾರ ನಿಲ್ಲುತ್ತದೆ ಎಂದು ಭರವಸೆ ನೀಡಿದ ಅವರು, ಮಾರ್ಚ್ 11 ರಂದು ಮುಖ್ಯಮಂತ್ರಿಗಳು ಪರಿಸ್ಥಿತಿಯನ್ನು ಅವಲೋಕಿಸಿ ಕುಸಿತ ಘಟನೆ ಬಗ್ಗೆ ಹೇಳಿಕೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಎನ್.ಉತ್ತಮ್ ಕುಮಾರ್ ರೆಡ್ಡಿ ಶನಿವಾರ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯದ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮೂವರು ಇರುವ ಬಗ್ಗೆ ಸುಳಿವು ಸಿಕ್ಕಿದೆ. ಅವರಿದ್ದಾರೆ ಎಂದು ಗುರುತಿಸಲಾದ ಸ್ಥಳದಲ್ಲಿ ರಾಥೋಲ್ ಗಣಿಗಾರರು ಕಾರ್ಯಾಚರಣೆ ಕೈಗೊಂಡಿದ್ದು, ಭಾನುವಾರದ ವೇಳೆಗೆ ಮಾಹಿತಿ ಸಿಗುವ ನಿರೀಕ್ಷೆಯಿದೆ. ನಾಪತ್ತೆಯಾದವರ ಪರಿಸ್ಥಿತಿ ಕುರಿತು ಮಾಹಿತಿ ತಿಳಿದುಬಂದ ನಂತರ ಸರ್ಕಾರ ಪರಿಹಾರ ಘೋಷಣೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಈ ಮಧ್ಯೆ ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, ಪ್ರಸ್ತುತ 525 ಸಿಬ್ಬಂದಿ ಪರಿಹಾರ ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.
Advertisement