ನವದೆಹಲಿ: ಕೇಜ್ರಿವಾಲ್ ವಿರುದ್ಧ FIR ದಾಖಲಿಸಲು ಕೋರ್ಟ್ ನಿರ್ದೇಶನ! ಇದೇ ಕಾರಣ

ಬೃಹತ್ ಹೋರ್ಡಿಂಗ್‌ ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.
Aravind Kejriwal
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ಎಎಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ ಐಆರ್ ದಾಖಲಿಸುವ ರಾಷ್ಟ್ರ ರಾಜಧಾನಿಯ ಸ್ಥಳೀಯ ನ್ಯಾಯಾಲಯವೊಂದು ಮಂಗಳವಾರ ನಿರ್ದೇಶನ ನೀಡಿದೆ.

ಬೃಹತ್ ಹೋರ್ಡಿಂಗ್‌ ಹಾಕುವಲ್ಲಿ ಸಾರ್ವಜನಿಕರ ಹಣ ದುರುಪಯೋಗ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ದೆಹಲಿಯ ಆಸ್ತಿ ವಿರೂಪಗೊಳಿಸುವಿಕೆ ಕಾಯ್ದೆ 2007 ರ ಸೆಕ್ಷನ್ 3 ಮತ್ತಿತರ ಅಪರಾಧದಡಿ ತಕ್ಷಣವೇ ಎಫ್‌ಐಆರ್ ದಾಖಲಿಸಲು ಸಂಬಂಧಿಸಿದ SHO ಗೆ ನಿರ್ದೇಶಿಸಲಾಗಿದೆ ಎಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನೇಹಾ ಮಿತ್ತಲ್ ಹೇಳಿದ್ದಾರೆ.

Aravind Kejriwal
ಪಂಜಾಬ್ ಮೂಲಕ ರಾಜ್ಯಸಭೆ ಪ್ರವೇಶಕ್ಕೆ ಕೇಜ್ರಿವಾಲ್ ಒಲವು?: ವದಂತಿ ಮಧ್ಯೆ ಲುಧಿಯಾನ ಪಶ್ಚಿಮ ಉ.ಚುನಾವಣೆ ಅಭ್ಯರ್ಥಿಯಾಗಿ ಸಂಜೀವ್ ಅರೋರ ಆಯ್ಕೆ

ಕೇಜ್ರಿವಾಲ್, ಆಗಿನ ಮಟಿಯಾಲಾ ಶಾಸಕ ಗುಲಾಬ್ ಸಿಂಗ್ (ಎಎಪಿ) ಮತ್ತು ಆಗಿನ ದ್ವಾರಕಾ ಎ ವಾರ್ಡ್ ಕೌನ್ಸಿಲರ್ ನಿತಿಕಾ ಶರ್ಮಾ ಅವರು ವಿವಿಧ ಸ್ಥಳಗಳಲ್ಲಿ ಬೃಹತ್ ಗಾತ್ರದ ಹೋರ್ಡಿಂಗ್‌ ಹಾಕುವ ಮೂಲಕ ಉದ್ದೇಶಪೂರ್ವಕವಾಗಿ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ" ಎಂದು 2019 ರಲ್ಲಿ ಸಲ್ಲಿಸಲಾದ ದೂರಿನಲ್ಲಿ ಆರೋಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com