Haryana Local Polls: ಕಾಂಗ್ರೆಸ್ ತೀವ್ರ ಮುಖಭಂಗ; BJP ಕ್ಲೀನ್ ಸ್ವೀಪ್, 10 ರಲ್ಲಿ 9 ಸ್ಥಾನ ಗೆಲುವು!

ಹರ್ಯಾಣ ವಿಧಾನಸಭೆ ಚುನಾವಣೆ ಬಳಿಕ ಮಹಾನಗರ ಪಾಲಿಕೆಗಳ ಮೇಯರ್ ಚುನಾವಣೆಯಲ್ಲೂ ಬಿಜೆಪಿ ತನ್ನ ಪಾರುಪತ್ಯ ಮುಂದುವರೆಸಿದ್ದು, ಇಂದು ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.
Haryana Local Polls
ಹರ್ಯಾಣ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು
Updated on

ಗುರುಗ್ರಾಮ: ಹರ್ಯಾಣ ಮಹಾನಗರ ಪಾಲಿಕೆಗಳ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, 10 ಮೇಯರ್ ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಬಿಜೆಪಿ ಗೆದ್ದು ಬೀಗಿದೆ.

ಹೌದು.. ಹರ್ಯಾಣ ವಿಧಾನಸಭೆ ಚುನಾವಣೆ ಬಳಿಕ ಮಹಾನಗರ ಪಾಲಿಕೆಗಳ ಮೇಯರ್ ಚುನಾವಣೆಯಲ್ಲೂ ಬಿಜೆಪಿ ತನ್ನ ಪಾರುಪತ್ಯ ಮುಂದುವರೆಸಿದ್ದು, ಇಂದು ಪ್ರಕಟಗೊಂಡ ಚುನಾವಣಾ ಫಲಿತಾಂಶದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

ಗುರುಗ್ರಾಮ್, ಹಿಸಾರ್, ಕರ್ನಾಲ್, ರೋಹ್ಟಕ್, ಫರಿದಾಬಾದ್, ಯಮುನಾನಗರ, ಪಾಣಿಪತ್, ಅಂಬಾಲ ಮತ್ತು ಸೋನಿಪತ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಮಾನೇಸರ್ ನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸ್ವತಂತ್ರ ಅಭ್ಯರ್ಥಿ ಡಾ. ಇಂದರ್ಜಿತ್ ಯಾದವ್ ಸೋಲಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಮಾನೇಸರ್, ಗುರುಗ್ರಾಮ್, ಫರಿದಾಬಾದ್, ಹಿಸಾರ್, ರೋಹ್ಟಕ್, ಕರ್ನಾಲ್, ಯಮುನಾನಗರ, ಪಾಣಿಪತ್, ಅಂಬಾಲ ಮತ್ತು ಸೋನಿಪತ್ ನಗರ ಪಾಲಿಕೆಗಳಲ್ಲಿ ಮೇಯರ್ ಮತ್ತು ವಾರ್ಡ್ ಸದಸ್ಯರ ಹುದ್ದೆಗಳಿಗೆ ಚುನಾವಣೆ ನಡೆದಿತ್ತು. ಅಂಬಾಲ ಮತ್ತು ಸೋನಿಪತ್ ಪುರಸಭೆಗಳ ಮೇಯರ್ ಹುದ್ದೆಗೆ ಉಪಚುನಾವಣೆಗಳು ಸಹ ನಡೆದಿತ್ತು.

ಕಾಂಗ್ರೆಸ್ ಗೆ ತೀವ್ರ ಮುಖಭಂಗ

ಇನ್ನು ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭೂಪೇಂದ್ರ ಹೂಡಾ, 'ಹಿಂದೆಯೂ ಸಹ ಪುರಸಭೆಯ ನಿಗಮಗಳಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿತ್ತು. ನಾವು ಸ್ಥಾನ ಕಳೆದುಕೊಂಡರೆ ಅದು ಹಿನ್ನಡೆಯಾಗಬಹುದು ಎಂದು ಹೇಳಲಾಗಿತ್ತು. ಆದರೆ ಅದು ಈ ಹಿಂದೆಯೇ ನಮ್ಮೊಂದಿಗೆ ಇರಲಿಲ್ಲ. ಕಾಂಗ್ರೆಸ್ ಕೆಲವು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರಬೇಕು. ಆದರೆ ಚುನಾವಣೆಯ ಸಮಯದಲ್ಲಿ ನಾನು ಎಲ್ಲಿಯೂ ಪ್ರಚಾರಕ್ಕೆ ಹೋಗಲಿಲ್ಲ. ಈ ಫಲಿತಾಂಶಗಳು ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರುತ್ತವೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

Haryana Local Polls
'ನದಿಯಲ್ಲಿ ಅಲ್ಲ.. ನಿಮ್ಮ ಮನಸ್ಸಿನಲ್ಲೇ ವಿಷ ತುಂಬಿದೆ': ಯಮುನಾ ನೀರು ಕುಡಿದು ಕೇಜ್ರಿವಾಲ್ ಗೆ ಹರ್ಯಾಣ ಸಿಎಂ ತಿರುಗೇಟು!

ಇದೇ ವಿಚಾರವಾಗಿ ಮಾತನಾಡಿದ ಹರ್ಯಾಣ ಸಿಎಂ ನವಾಬ್ ಸಿಂಗ್ ಸೈನಿ, 'ಜನರು 'ತ್ರಿವಳಿ-ಎಂಜಿನ್' ಸರ್ಕಾರಕ್ಕೆ ತಮ್ಮ ಅನುಮೋದನೆಯ ಮುದ್ರೆ ಹಾಕಿದ್ದಾರೆ. ನಾನು ಜನರಿಗೆ ನನ್ನ ಹೃದಯದಾಳದಿಂದ ಧನ್ಯವಾದ ಹೇಳುತ್ತೇನೆ" ಎಂದು ಹೇಳಿದ್ದಾರೆ. ಅಂತೆಯೇ "ನಮ್ಮ ಸ್ಥಳೀಯ ಸಂಸ್ಥೆ ಸರ್ಕಾರ ಮತ್ತು ಈ 'ತ್ರಿವಳಿ-ಎಂಜಿನ್' ಸರ್ಕಾರವು ಪ್ರಧಾನಿ ನರೇಂದ್ರ ಮೋದಿಯವರ 'ವಿಕಸಿತ ಭಾರತ', 'ಅಭಿವೃದ್ಧಿ ಹೊಂದಿದ ಭಾರತ'ದ ದೃಷ್ಟಿಕೋನವನ್ನು ಈಡೇರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com