
ಗುಜರಾತ್: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದ ದಲಿತ ವ್ಯಕ್ತಿಯೊಬ್ಬನನ್ನು ಮಹಿಳೆಯ ಪತಿ ಹಾಗೂ ಸಂಬಂಧಿಕರು ಥಳಿಸಿ, ಬೆತ್ತಲೆ ಮೆರವಣಿಗೆ ಮಾಡಿರುವ ಘಟನೆ ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ನಡೆದಿದೆ.
ಮಾರ್ಚ್ 11 ರ ರಾತ್ರಿ ಇಡಾರ್ ಪಟ್ಟಣದ ಸಮೀಪವಿರುವ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ 20 ವರ್ಷದ ವ್ಯಕ್ತಿ ಬೆತ್ತಲೆಯಾಗಿ ನಡೆದು ಹೋಗುತ್ತಿದ್ದರೆ ಗುಂಪು ಹಲ್ಲೆ ಮಾಡುತ್ತಿರುವ ದೃಶ್ಯವನ್ನು ನೋಡಬಹುದು.
ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಹಿಮ್ಮತ್‌ನಗರದಿಂದ 20 ಕಿಲೋಮೀಟರ್ ದೂರದಲ್ಲಿರುವ ಇದಾರ್ ಪಟ್ಟಣದ ಮನೆಯಿಂದ ಅಪಹರಿಸಿ, ಥಳಿಸಿ ಬೆತ್ತಲೆ ಮೆರವಣಿಗೆ ನಡೆಸಲಾಗಿದೆ.
ವೈರಲ್ ವಿಡಿಯೋ ಆಧರಿಸಿ ಮಹಿಳೆಯ ಪತಿ ಮತ್ತು ಇತರ ಸಂಬಂಧಿಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕ್ಷಮಾಪಣೆ ಪತ್ರಕ್ಕೆ ಸಹಿ ಹಾಕಿದ ನಂತರವೇ ಅವರನ್ನು ಬಿಡಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಜಯಕಾಂತ್ ಪಟೇಲ್ ತಿಳಿಸಿದ್ದಾರೆ.
"ಬುಧವಾರ ವಿಡಿಯೋ ವೈರಲ್ ಆದ ಬಳಿಕಸಂತ್ರಸ್ತೆಯನ್ನು ಸಂಪರ್ಕಿಸಿದ್ದೇವೆ. ಇಂದು ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಎಸ್‌ಸಿ/ಎಸ್‌ಸಿ (ದೌರ್ಜನ್ಯ ತಡೆ) ಕಾಯ್ದೆಯಡಿ ಅಪಹರಣ, ಹಲ್ಲೆ ಮತ್ತು ಇತರ ಅಪರಾಧಗಳ ಆರೋಪ ಹೊರಿಸಲಾಗಿದೆ. ಪ್ರಕರಣದಲ್ಲಿ ಯಾವುದೇ ಬಂಧನವಾಗಿಲ್ಲ" ಎಂದು ಎಸ್‌ಪಿ ಮಾಹಿತಿ ನೀಡಿದರು.
Advertisement