
ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ವೇಗವಾಗಿ ಬಂದ ಐಷಾರಾಮಿ ಮರ್ಸಿಡಿಸ್ Benz ಕಾರೊಂದು ಪಾದಚಾರಿಗಳ ಮೇಲೆ ಹರಿದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಡೆಹ್ರಾಡೂನ್‌ನ ರಾಜ್‌ಪುರ ರಸ್ತೆಯಲ್ಲಿರುವ ಸಾಯಿ ಮಂದಿರ ಬಳಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಘಟನೆ ನಂತರ ತ್ವರಿತವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಆದರೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಎಸ್‌ಎಸ್‌ಪಿ ಡೆಹ್ರಾಡೂನ್ ಅವರ ಮೇಲ್ವಿಚಾರಣೆಯಲ್ಲಿ, ಪೊಲೀಸರು ರಾತ್ರಿಯಿಡೀ ತೀವ್ರ ತನಿಖಾ ಕಾರ್ಯಾಚರಣೆ ನಡೆಸಿ ಪ್ರಕರಣದಲ್ಲಿ ಪ್ರಮುಖ ಮಾಹಿತಿ ಸಂಗ್ರಹಿಸಿದ್ದಾರೆ.
ಪೊಲೀಸರ ಪ್ರಕಾರ, ತನಿಖೆಯ ಸಮಯದಲ್ಲಿ, ಅಪಘಾತಕ್ಕೀಡಾದ ವಾಹನವನ್ನು ದೆಹಲಿಯಿಂದ ಖರೀದಿಸಲಾಗಿದೆ ಎಂದು ಪೊಲೀಸರಿಗೆ ತಿಳಿದುಬಂದಿದೆ. ಈ ಮಾಹಿತಿಯ ಆಧಾರದ ಮೇಲೆ, ಡೆಹ್ರಾಡೂನ್ ಪೊಲೀಸರ ತಂಡ ರಾತ್ರಿ ದೆಹಲಿಗೆ ತೆರಳಿ ವಾಹನಕ್ಕೆ ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಸಂಗ್ರಹಿಸಿದೆ. ಅಲ್ಲದೆ, ವಿಶೇಷ ಪೊಲೀಸ್ ತಂಡ ಚಂಡೀಗಢ ತಲುಪಿದ್ದು, ವಾಹನ ಮಾಲೀಕರನ್ನು ವಿಚಾರಣೆ ನಡೆಸುತ್ತಿದೆ.
ಕಾರು ಚಂಡೀಗಢದ ನೋಂದಣಿ ಸಂಖ್ಯೆಯನ್ನು ಹೊಂದಿದೆ.
ANI ಜೊತೆ ಮಾತನಾಡಿದ ಡೆಹ್ರಾಡೂನ್ ಎಸ್‌ಎಸ್‌ಪಿ ಅಜಯ್ ಸಿಂಗ್, ನಿನ್ನೆ ರಾತ್ರಿ ಅಪಘಾತಕ್ಕೀಡಾದ ಕಾರನ್ನು ಚಲಾಯಿಸುತ್ತಿದ್ದಾಗ ವ್ಯಕ್ತಿಯೊಂದಿಗೆ 10 ವರ್ಷದ ಮಗುವೂ ಇತ್ತು" ಎಂದು ಹೇಳಿದ್ದಾರೆ.
"ರಾತ್ರಿ 8 ಗಂಟೆ ಸುಮಾರಿಗೆ ಹಳೆ ಮಸ್ಸೂರಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ವಾಹನ ಕೆಲವು ಜನರಿಗೆ ಡಿಕ್ಕಿ ಹೊಡೆದಿದ್ದು, ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ... ವಾಹನದ ಚಾಲಕನನ್ನು ಶೀಘ್ರದಲ್ಲೇ ಪತ್ತೆಹಚ್ಚುವ ಭರವಸೆ ನಮಗಿದೆ..." ಎಂದು ಅವರು ತಿಳಿಸಿದ್ದಾರೆ.
Advertisement