ದೇಶ

ಮಗಳನ್ನು 29ನೇ ಮಹಡಿಯಿಂದ ತಳ್ಳಿ, ತಾನೂ ಜಿಗಿದು ಮಹಿಳೆ ಆತ್ಮಹತ್ಯೆ!

ಮಗಳನ್ನು 29ನೇ ಮಹಡಿಯಿಂದ ತಳ್ಳಿ, ತಾನೂ ಜಿಗಿದು ಮಹಿಳೆ ಆತ್ಮಹತ್ಯೆ!
ಸಾಂದರ್ಭಿಕ ಚಿತ್ರ
Published On :

ಮುಂಬೈ: ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ಮಹಿಳೆಯೊಬ್ಬರು ತನ್ನ ಎಂಟು ವರ್ಷದ ಮಗಳನ್ನು ತಮ್ಮ 29ನೇ ಮಹಡಿಯ ಫ್ಲಾಟ್‌ನಿಂದ ತಳ್ಳಿ ನಂತರ ತಾನೂ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗುರುವಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆ ಬುಧವಾರ ಬೆಳಗ್ಗೆ 8 ಗಂಟೆಗೆ ಪಲಸ್ಪೆಯಲ್ಲಿ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

"ಮಗಳನ್ನು ತಳ್ಳಿದ 37 ವರ್ಷದ ಮೈಥಿಲಿ ದುವಾ ಎಂಬ ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದಳು ಎಂದು ವರದಿಯಾಗಿದೆ. ಮೈಥಿಲಿ ತನ್ನ ಮಗುವನ್ನು ತಳ್ಳಿ ನಂತರ ತಾನೂ ಜಿಗಿದಿದ್ದಾಳೆ. ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಪನ್ವೇಲ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.