
ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಶುಕ್ರವಾರ ವೇಗವಾಗಿ ಬಂದ ಕಾರೊಂದು ಮೂರು ಇ-ರಿಕ್ಷಾಗಳಿಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಪ್ರಾ ಪ್ರದೇಶದ ಲಕ್ಷ್ಮಿಗಚ್ಛಾದಲ್ಲಿ ಈ ಅಪಘಾತ ಸಂಭವಿಸಿದೆ. ಆಟೋದಲ್ಲಿದ್ದವರು ಮುಂಬರುವ ಈದ್ ಹಬ್ಬಕ್ಕಾಗಿ ಶಾಪಿಂಗ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎದುರು ಬದಿಯಿಂದ ವೇಗವಾಗಿ ಬಂದ ಎಸ್ ಯುವಿ ಕಾರು, ಮೂರು ಇ-ರಿಕ್ಷಾಗಳಿಗೆ ಒಂದರ ನಂತರ ಒಂದರಂತೆ ಡಿಕ್ಕಿ ಹೊಡೆದ ಪರಿಣಾಮ ಆಟೋಗಳಲ್ಲಿದ್ದ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಎಂಟು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಪಘಾತದ ನಂತರ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವ ಕಾರಿನ ಚಾಲಕನಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Advertisement